ಪೋರ್ಷೆ ಕಾರು ಅಪಘಾತ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ, ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು

ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ವಿಶಾಲ್ ಅಗರ್ವಾಲ್ ಗೆ ನ್ಯಾಯಾಂಗ ಬಂಧನ
ವಿಶಾಲ್ ಅಗರ್ವಾಲ್ ಗೆ ನ್ಯಾಯಾಂಗ ಬಂಧನ
Updated on

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

'ಮಾಹಿತಿ ನೀಡಲು ವಿಳಂಬ' ಮತ್ತು 'ಕರ್ತವ್ಯಲೋಪ' ಆರೋಪದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ರಾಹುಲ್ ಜಗದಾಳೆ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ ತೋಡ್ಕರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ತಿಳಿಸಿದ್ದಾರೆ.

ಕಲ್ಯಾಣಿನಗರದಲ್ಲಿ ಕಾರು ಅಪಘಾತವಾದ ನಂತರ ಯರವಾಡ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸ್ ಅಧಿಕಾರಿಗಳ ಲೋಪ ಎಸಗಿರುವುದು ಆಂತರಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಅಪ್ರಾಪ್ತನ ರಕ್ತದ ಮಾದರಿಗಳನ್ನು ಸಂಗ್ರಹಿಸುವಲ್ಲಿ ವಿಳಂಬವಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಅಪಘಾತಕ್ಕೂ ಮುನ್ನ ಅಪ್ರಾಪ್ತರು ಎರಡು ಪಬ್‌ಗಳಲ್ಲಿ ಮದ್ಯ ಸೇವಿಸಿದ್ದರು. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ರಾತ್ರಿ 11 ಗಂಟೆಗೆ ರಕ್ತದ ಮಾದರಿ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಈ ಅಪರಾಧವನ್ನು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ದಾಖಲಿಸಲಾಗಿತ್ತು. ನಂತರ ಸೆಕ್ಷನ್ 304 ಅನ್ನು ಸೇರಿಸಲಾಯಿತು ಎಂದು ಕುಮಾರ್ ಹೇಳಿದರು. ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು.

ವಿಶಾಲ್ ಅಗರ್ವಾಲ್ ಗೆ ನ್ಯಾಯಾಂಗ ಬಂಧನ
Pune Porsche crash: ಅಪ್ರಾಪ್ತ ಚಾಲಕನ ಜಾಮೀನು ರದ್ದು, observation home ಗೆ ರವಾನೆ!

ಅಪ್ರಾಪ್ತ ಬಾಲಕನ ತಂದೆ ಮತ್ತು ಇತರ ಐವರಿಗೆ ಜೂನ್ 7ರವರೆಗೆ ನ್ಯಾಯಾಂಗ ಬಂಧನ

ಪೋರ್ಷೆ ಅಪಘಾತ ಪ್ರಕರಣದ ಆರೋಪಿ 17 ವರ್ಷದ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಸೇರಿದಂತೆ ಆರು ಮಂದಿಯನ್ನು ಪುಣೆ ನ್ಯಾಯಾಲಯ ಶುಕ್ರವಾರ ಜೂನ್ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಮುಂಜಾನೆ ಪೋರ್ಷೆ ಕಾರನ್ನು ಚಲಾಯಿಸುತ್ತಿದ್ದ ಅಪ್ರಾಪ್ತ ಚಾಲಕ, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗುದ್ದಿ ಹತ್ಯೆ ಮಾಡಿದ್ದನು. ಹದಿಹರೆಯದವರು ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಬಾಲಕ ಕಾರು ಚಲಾಯಿಸುತ್ತಿಲ್ಲ ಎಂದು ತೋರಿಸುವ ಪ್ರಯತ್ನ: ಪುಣೆ ಪೊಲೀಸ್ ಆಯುಕ್ತ

ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತನು ಕಾರನ್ನು ಓಡಿಸುತ್ತಿರಲಿಲ್ಲ ಎಂದು ತೋರಿಸಲು ಸಾಕ್ಷ್ಯವನ್ನು ತಿರುಚಲು ಪ್ರಯತ್ನಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ. ಕಾರನ್ನು ವಯಸ್ಕ ಚಾಲಕ ಓಡಿಸುತ್ತಿದ್ದ ಎಂದು ತೋರಿಸಲು ಪ್ರಯತ್ನಿಸಲಾಯಿತು, ಆದರೆ ಪ್ರಯತ್ನ ವಿಫಲವಾಯಿತು ಎಂದು ಕುಮಾರ್ ತಿಳಿಸಿದರು. ಅಪ್ತಾಪ್ತನು ಪಬ್‌ನಲ್ಲಿ ಮದ್ಯ ಸೇವಿಸಿರುವ ಸಿಸಿಟಿವಿ ದೃಶ್ಯಾವಳಿ ನಮ್ಮ ಬಳಿ ಇದೆ. ಇದರರ್ಥ ನಮ್ಮ ಪ್ರಕರಣವು ರಕ್ತದ ವರದಿಯ ಮೇಲೆ ಮಾತ್ರ ಅವಲಂಬಿತವಾಗಿಲ್ಲ. ನಮ್ಮ ಬಳಿ ಇತರ ಪುರಾವೆಗಳಿವೆ ಎಂದು ಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com