Rajkot Game Zone Fire: ರಾಜ್‌ಕೋಟ್‌ನ ಗೇಮ್‌ಝೋನ್‌ನಲ್ಲಿ ಅಗ್ನಿ ದುರಂತ; 12 ಮಕ್ಕಳು ಸೇರಿ 27 ಮಂದಿ ಸಜೀವ ದಹನ!

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 27 ಮಂದಿ ಸಜೀವ ದಹನಗೊಂಡಿದ್ದಾರೆ.
ಅಗ್ನಿ ಅವಘಡ
ಅಗ್ನಿ ಅವಘಡ
Updated on

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 27 ಮಂದಿ ಸಜೀವ ದಹನಗೊಂಡಿದ್ದಾರೆ. ಬೆಂಕಿ ಅವಘಡದ ನಂತರ ಇಡೀ ಆಟದ ವಲಯ ಸುಟ್ಟು ಬೂದಿಯಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಸುಮಾರು 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯ ಜೊತೆಗೆ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ.

ಮಧ್ಯಾಹ್ನ ಟಿಆರ್‌ಪಿ ಗೇಮಿಂಗ್ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ನಾವು ಸಾಧ್ಯವಾದಷ್ಟು ಮೃತ ದೇಹಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಇದುವರೆಗೆ ಸುಮಾರು 27 ಮೃತದೇಹಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗೇಮಿಂಗ್ ವಲಯದ ಮಾಲೀಕರು ಯುವರಾಜ್ ಸಿಂಗ್ ಸೋಲಂಕಿ ವಿರುದ್ಧ ನಿರ್ಲಕ್ಷ್ಯ ಕುರಿತಂತೆ ಪ್ರಕರಣ ದಾಖಲಿಸುತ್ತೇವೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಇಲ್ಲಿ ಹೆಚ್ಚಿನ ತನಿಖೆ ನಡೆಯಲಿದೆ.

ಎಎನ್‌ಐ ವರದಿಯ ಪ್ರಕಾರ, ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರದಿಂದ ಗೋಚರಿಸುತ್ತದೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ. ಆದಷ್ಟು ಬೇಗ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.

ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ಸಿಎಂ ಸೂಚನೆ

ಏತನ್ಮಧ್ಯೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ದುರಂತದ ಹಿನ್ನೆಲೆಯಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಮತ್ತು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಭೂಪೇಂದ್ರ ಪಟೇಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 'ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಬೆಂಕಿಯ ಘಟನೆಯಲ್ಲಿ, ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆಗೂ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಅಗ್ನಿ ಅವಘಡ
ಮುಂಬೈ: ಸಿಯೋನ್ ಆಸ್ಪತ್ರೆಗೆ ನುಗ್ಗಿದ ಕಾರು, ವೃದ್ಧೆ ಸಾವು

ಬೆಂಕಿ ಅವಘಡದ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು?

ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಂದು ರಾಜ್‌ಕೋಟ್‌ನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ ಎಂದು ಬಿಜೆಪಿ ಶಾಸಕ ದರ್ಶಿತಾ ಶಾ ಹೇಳಿದ್ದಾರೆ. ರಾಜ್ ಕೋಟ್ ನ ಇತಿಹಾಸದಲ್ಲಿ ಗೇಮ್ ಝೋನ್ ನಲ್ಲಿ ಬೆಂಕಿ ತಗುಲಿ ಮಕ್ಕಳು ಪ್ರಾಣ ಕಳೆದುಕೊಂಡಿರುವುದು ಇದೇ ಮೊದಲು. ರಕ್ಷಣಾ ತಂಡವು ಸಾಧ್ಯವಾದಷ್ಟು ಜನರನ್ನು ಉಳಿಸಲು ಪ್ರಯತ್ನಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ಕ್ರಮ ಕೈಗೊಳ್ಳುತ್ತದೆ. ಆದರೆ ಇದೀಗ ಸಾಧ್ಯವಾದಷ್ಟು ಜನರನ್ನು ಉಳಿಸುವುದು ಆದ್ಯತೆಯಾಗಿದೆ.

ಮಾಲೀಕನನ್ನು ವಶಕ್ಕೆ ಪಡೆದ ಪೊಲೀಸರು

ಗೇಮ್ ಝೋನ್ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ಅವರನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದಾರೆ. ಗೇಮ್ ಝೋನ್‌ನ ಮ್ಯಾನೇಜರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಆಟದ ವಲಯದ ಒಂದು ಭಾಗದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ಎರಡು ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೇಮ್ ಝೋನ್ ಬಂದ್ ಆಗಿತ್ತು. ಆದಾಗ್ಯೂ, ಒಂದು ದಿನದ ನಂತರ ಆಟದ ವಲಯವನ್ನು ಪುನಃ ತೆರೆಯಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com