ಪಾಕ್ ಬೆಂಬಲ: ರಾಹುಲ್ ಗಾಂಧಿ, ಕೇಜ್ರಿವಾಲ್ ವಿರುದ್ಧದ ತನಿಖೆ ಬಗ್ಗೆ ಪ್ರಧಾನಿ ಮೋದಿ ಮಾತು ಹೀಗಿದೆ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಪಾಕ್ ನಾಯಕ ಮೇಲ್ನೋಟಕ್ಕೆ ಬೆಂಬಲಿಸಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.
Rahul Gandhi-PM Modi
ರಾಹುಲ್ ಗಾಂಧಿ, ಪ್ರಧಾನಿ ಮೋದಿonline desk
Updated on

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಪಾಕ್ ನಾಯಕ ಮೇಲ್ನೋಟಕ್ಕೆ ಬೆಂಬಲಿಸಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪಾಕ್ ನಾಯಕನೋರ್ವ ರಾಹುಲ್ ಗಾಂಧಿ ಹಾಗೂ ಅರವಿಂದ್ ಕೇಜ್ರಿವಾಲ್ ಗೆ ಬೆಂಬಲ ಪ್ರಕಟಿಸಿರುವುದು ಗಂಭೀರವಾದ ವಿಷಯವಾಗಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ IANS ಗೆ ಸಂದರ್ಶನ ನೀಡಿರುವ ನರೇಂದ್ರ ಮೋದಿ, ನಾನು ಇರುವ ಹುದ್ದೆಗೆ ಇಂತಹ ವಿಷಯಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಉಚಿತವಲ್ಲ, ಆದರೆ ನಿಮ್ಮ ಆತಂಕ ನನಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಚುನಾವಣೆ ನಡೆಯುತ್ತಿದ್ದಾಗ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್, ಅರವಿಂದ್ ಕೇಜ್ರಿವಾಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Rahul Gandhi-PM Modi
ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಲಿದೆ; 400 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಗೆ ಗೆಲುವು: ಪ್ರಧಾನಿ ನರೇಂದ್ರ ಮೋದಿ (ಸಂದರ್ಶನ)

ಈ ವಿಷಯವಾಗಿ ಕೇಳಿದಾಗ, ಮಾತನಾಡಿರುವ ಪ್ರಧಾನಿ ಮೋದಿ, ನಮ್ಮೊಂದಿಗೆ ಶತ್ರುತ್ವ ಹೊಂದಿರುವ ಜನರಿಂದ ಅದ್ಯಾಕೆ ಕೆಲವರು ಮಾತ್ರ ಮೆಚ್ಚಲ್ಪಡುತ್ತಾರೆ ಎಂಬುದು ಅರ್ಥವಾಗುವುದಿಲ್ಲ, ಅಲ್ಲಿಂದ ಕೆಲವರ ಪರವಾಗಿ ಯಾಕೆ ಧ್ವನಿ ಕೇಳಿಬರುತ್ತದೆ ಎಂಬುದು ಗೊತ್ತಿಲ್ಲ ಎಂದಿದ್ದಾರೆ.

ಇದು ಕಳವಳಕಾರಿ ಸಂಗತಿ ಎಂದು ಒಪ್ಪಿಕೊಂಡ ಪ್ರಧಾನಿ, ಭಾರತೀಯ ಮತದಾರರು ಪ್ರಬುದ್ಧರಾಗಿದ್ದಾರೆ ಮತ್ತು ಗಡಿಯಾಚೆಗಿನ ಹೇಳಿಕೆಗಳು ಭಾರತದಲ್ಲಿನ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

"ಚುನಾವಣೆಯು ಭಾರತದ್ದಾಗಿದೆ ಮತ್ತು ಭಾರತದ ಪ್ರಜಾಪ್ರಭುತ್ವವು ಬಹಳ ಪ್ರಬುದ್ಧವಾಗಿದೆ. ಆರೋಗ್ಯಕರ ಸಂಪ್ರದಾಯಗಳನ್ನು ಹೊಂದಿದೆ ಮತ್ತು ಭಾರತದ ಮತದಾರರು ಯಾವುದೇ ಹೊರಗಿನ ಚಟುವಟಿಕೆಗಳಿಂದ ಪ್ರಭಾವಿತರಾದ ಮತದಾರರಲ್ಲ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com