LoC ಬಳಿ ಶಂಕಿತ ಪಾಕ್ ಡ್ರೋನ್ ಮೇಲೆ BSF ಗುಂಡಿನ ದಾಳಿ!

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಹಲವು ಸುತ್ತು ಗುಂಡು ಹಾರಿಸಿ ಶಂಕಿತ ಪಾಕಿಸ್ತಾನಿ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಪೊಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಹಲವು ಸುತ್ತು ಗುಂಡು ಹಾರಿಸಿ ಶಂಕಿತ ಪಾಕಿಸ್ತಾನಿ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11.30 ರ ಸುಮಾರಿಗೆ ಖಾನೇತಾರ್ ಗ್ಯಾರಿಸನ್‌ನಲ್ಲಿ ಗಡಿಯಾಚೆಯಿಂದ ಡ್ರೋಣ್ ಚಟುವಟಿಕೆ ಗಮನಿಸಿದ ಭದ್ರತಾ ಪಡೆ, ನಂತರ ಕಾರ್ಯಪ್ರವೃತ್ತರಾಗಿದ್ದಾರೆ. ಮೂರು ಡಜನ್ ಸುತ್ತು ಗುಂಡು ಹಾರಿಸುವ ಮೂಲಕ ಡ್ರೋನ್ ಹೊಡೆದುರುಳಿಸಲಾಗಿದೆ. ಇಡೀ ಪ್ರದೇಶದ ಮೇಲೆ ನಿಗಾ ವಹಿಸಲಾಗಿದ್ದು, ಇಂದು ಬೆಳಿಗ್ಗೆ ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಪಂಜಾಬ್: ಪಾಕ್ ಗಡಿಯಲ್ಲಿ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತು ಸಾಗಟ ನಿಯಂತ್ರಣ ಉದ್ದೇಶದಿಂದ ಗಡಿಯಾಚೆಯಿಂದ ಹಾರಿಸಲಾದ ಡ್ರೋನ್‌ನ ಬಗ್ಗೆ ತಿಳಿಸುವವರಿಗೆ 3 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com