
ನವದೆಹಲಿ: ಶನಿವಾರ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಹಾಗೂ ಏಳು ರಾಜ್ಯಗಳು 57 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದಿದೆ.
ಪಂಜಾಬ್ ಹಾಗೂ ಉತ್ತರ ಪ್ರದೇಶದ ತಲಾ 13 ಕ್ಷೇತ್ರಗಳು, ಹಿಮಾಚಲ ಪ್ರದೇಶದ 4, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಜಾರ್ಖಂಡ್ ನ ಮೂರು, ಚಂಢೀಗಡದ 1 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 486 ಸ್ಥಾನಗಳಲ್ಲಿ ಈಗಾಗಲೇ ಮತದಾನ ಮುಗಿದಿದೆ. ಮೊದಲ ಆರು ಹಂತಗಳಲ್ಲಿ ಕ್ರಮವಾಗಿ ಶೇ. 66.14 66.71, 65.68, 69.16, 62.2 ಮತ್ತು 63.36 ರಷ್ಟು ಮತದಾನವಾಗಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
Advertisement