ಹರಿದ್ವಾರ: ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರಿಡ್ಜ್‌ನಲ್ಲಿಟ್ಟಿದ್ದ 15 ವರ್ಷದ ಬಾಲಕಿಯ ಬಂಧನ!

ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಜೋಡಿ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಡೆಹ್ರಾಡೂನ್: ತನ್ನ ತಂದೆ ಮತ್ತು 8 ವರ್ಷದ ತನ್ನ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿ, ಅವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ 15 ವರ್ಷದ ಬಾಲಕಿಯನ್ನು ಉತ್ತರಾಖಂಡ್‌ನ ಹರಿದ್ವಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಜೋಡಿ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರ ಬಾಲಕಿಯನ್ನು ಪಟ್ಟಣದಲ್ಲಿ ಗುರುತಿಸಿದ ನಂತರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ಅಧೀಕ್ಷಕ ಪ್ರಮೇಂದ್ರ ದೋಭಾಲ್ ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ತುಮಕೂರು: ಪತ್ನಿ ಕತ್ತು ಕತ್ತರಿಸಿ, ಚರ್ಮ ಸುಲಿದ ಪ್ರಕರಣ; ನನ್ನ ಸೇವಾವಧಿಯಲ್ಲಿ ಇಂತಹ ಭೀಭತ್ಸ ಹತ್ಯೆ ನೋಡಿರಲಿಲ್ಲ- ಇನ್‌ಸ್ಪೆಕ್ಟರ್‌

ಆಕೆ ತನ್ನ ಪ್ರಿಯಕರನೊಂದಿಗೆ ಹರಿದ್ವಾರಕ್ಕೆ ಬಂದಿರುವುದಾಗಿ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾಳೆ ಎಂದು ಅಧಿಕಾರಿ ಹೇಳಿದ್ದಾರೆ.

19ರ ಹರೆಯದ ಯುವಕನ ಜೊತೆಗಿನ ಸಂಬಂಧವನ್ನು ವಿರೋಧಿಸಿದ ತನ್ನ ತಂದೆಯನ್ನು ಬಾಲಕಿ ಹತ್ಯೆ ಮಾಡಿದ್ದಾರೆ. ಆಕೆಯ ತಮ್ಮ ಈ ಕೃತ್ಯವನ್ನು ಕಣ್ಣಾರೆ ಕಂಡಿದ್ದರಿಂದ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ದೋಭಾಲ್ ತಿಳಿಸಿದ್ದಾರೆ.

ಅವರು ಓಡಿಹೋಗುವ ಮೊದಲು ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಫ್ರೀಜರ್‌ನಲ್ಲಿ ತುಂಬಿದ್ದಾರೆ ಮತ್ತು ಹುಡುಗಿಯ ಪ್ರಕಾರ, ಕೊಲೆಯನ್ನು ಆಕೆಯ ಗೆಳೆಯ ಪ್ಲಾನ್ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿಯನ್ನು ಮಧ್ಯಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಆಕೆಯ ಪ್ರಿಯಕರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ದೋಭಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com