
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಈ ತಿಂಗಳ ಆರಂಭದಲ್ಲಿ ಸಿಎಂ ನಿವಾಸದಲ್ಲಿ ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಸಲ್ಲಿಸಿದ್ದ ಮನವಿಯ ನಿರ್ವಹಣೆಯ ವಿಷಯದ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ಇಂದು ಈ ಪ್ರಕರಣದ ಆದೇಶ ನೀಡಿದ್ದು, ಭಿಭವ್ ಕುಮಾರ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಪೋಲೀಸರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಅರ್ಜಿಯನ್ನು ನಿರ್ವಹಿಸುವಂತಿಲ್ಲ ಎಂಬ ಕಾರಣಕ್ಕೆ ನೋಟಿಸ್ ಜಾರಿ ಮಾಡುವುದನ್ನು ವಿರೋಧಿಸಿದ್ದರು.
ಭಿಭವ್ ಕುಮಾರ್ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರ ಮುಂದೆ ಹಾಜರುಪಡಿಸಲಾಗಿತ್ತು.
Advertisement