ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು; ಬೇರೆ ಧರ್ಮದವರಿಗೆ VRS: TTD ನಿರ್ಧಾರ

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ" ಎಂದು ಅವರು ಹೇಳಿದರು.
TTD Board B R Naidu
ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ಡು
Updated on

ಹೈದರಾಬಾದ್: ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ" ಎಂದು ಅವರು ಹೇಳಿದರು. ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾದ ನಾಯ್ಡು ಅವರು ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಒಂದು ವಿಶೇಷತೆ ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ. ಮಂಡಳಿಯ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಎನ್‌ಡಿಎ ಸರ್ಕಾರದ ಇತರ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದರು.

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ತಿರುಮಲದಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಬಿಆರ್‌ ನಾಯ್ಡು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಬೇಕು. ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೆಲಸ ಮಾಡುವುದಾಗಿ ಹೇಳಿದರು. ಬಿ ಆರ್ ನಾಯ್ಡು ಅವರು ಹಿಂದೂ ಭಕ್ತಿ ಚಾನೆಲ್ ಸೇರಿದಂತೆ ತೆಲುಗು ಟಿವಿ ಚಾನೆಲ್‌ಗಳನ್ನು ನಡೆಸುತ್ತಿರುವ ಮಾಧ್ಯಮ ವ್ಯಕ್ತಿಯಾಗಿದ್ದಾರೆ. ತಿರುಮಲ ತಿರುಪತಿಯಲ್ಲಿರುವ ಪ್ರಸಿದ್ಧ ಬಾಲಾಜಿ ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಗಾಗಿ ಆಂಧ್ರ ಪ್ರದೇಶ ಸರ್ಕಾರವು 24 ಸದಸ್ಯರೊಂದಿಗೆ ಹೊಸ ಮಂಡಳಿಯನ್ನು ಬುಧವಾರ ರಚಿಸಿದೆ.

TTD Board B R Naidu
ತಿರುಪತಿ ಲಡ್ಡು ಪ್ರಸಾದದ ಗುಣಮಟ್ಟ ಸುಧಾರಿಸಿದೆ ಎಂದು ಭಕ್ತರು ಹೇಳುತ್ತಿದ್ದಾರೆ: ಬ್ರಹ್ಮೋತ್ಸವಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು ನಾಯ್ಡು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com