ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಶನಿವಾರ ನಡೆದ ಉಗ್ರರ ಜೊತೆಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಬೆಳಿಗ್ಗೆ ಖನ್ಯಾರ್‌ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದು ಎನ್ ಕೌಂಟರ್ ಗೆ ತಿರುಗಿದ್ದು, ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಪ್ರತಿದಾಳಿ ನಡೆಸಲಾಗಿದೆ ಎಂದು ಅವರು ಹೇಳಿದರು.
ಗುಂಡಿನ ಚಕಮಕಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನೆಯ 92 ಮೂಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಕಡೆ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement