ಕೇರಳ: ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ಸಾವು

ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
Dead Body
ಮೃತದೇಹಗಳನ್ನು ಸ್ಥಳಾಂತರಿಸುತ್ತಿರುವ ಪೊಲೀಸರು
Updated on

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ರೈಲು ನಿಲ್ದಾಣದಿಂದ ಕೆಲ ಕಿ.ಮೀ. ದೂರದಲ್ಲಿರುವ ಶೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 3.05 ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಹಳಿಯಿಂದ ಕಾರ್ಮಿಕರು ಎಸೆಯಲ್ಪಟ್ಟಿದ್ದಾರೆ. ಮೂವರ ಶವಗಳನ್ನು ಈ ಪ್ರದೇಶದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಇದು ಭರತಪುಳ ನದಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dead Body
ದೊಡ್ಡಬಳ್ಳಾಪುರ ಬಳಿ ರೈಲು ಡಿಕ್ಕಿ ಹೊಡೆದು ದಂಪತಿ ಸಾವು

ರೈಲ್ವೇ ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಕಾರ್ಮಿಕರು ರೈಲು ಸಮೀಪಿಸುತ್ತಿರುವುದನ್ನು ಗಮನಿಸದೇ ಇರುವುದು ಅಪಘಾತಕ್ಕೆ ಕಾರಣವಾಗಿರಬಹುದು. ಈ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಶೋರನೂರು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com