ಸಲಹೆ ನೀಡಲು ಒಂದು ಚುನಾವಣೆಗೆ 100 ಕೋಟಿ ರೂ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್

ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರದ ಮೇಲೆ ನಡೆಯುತ್ತಿವೆ. ನನ್ನ ಪ್ರಚಾರಕ್ಕಾಗಿ ಟೆಂಟ್‌ಗಳು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ?
 Prashant Kishor
ಪ್ರಶಾಂತ್ ಕಿಶೋರ್
Updated on

ಪಾಟ್ನಾ: ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್‌ ಕಿಶೋರ್‌ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ

ಬೆಳಗಂಜ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಶಾಂತ್ ಕಿಶೋರ್, ಜನರು ತಮ್ಮ ಅಭಿಯಾನಗಳಿಗೆ ಹಣದ ಮೂಲದ ಬಗ್ಗೆ ಆಗಾಗ್ಗೆ ಪ್ರಶ್ನಿಸುತ್ತಾರೆ. ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರದ ಮೇಲೆ ನಡೆಯುತ್ತಿವೆ. ನನ್ನ ಪ್ರಚಾರಕ್ಕಾಗಿ ಟೆಂಟ್‌ಗಳು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ? ನಾನು ಅಷ್ಟು ದುರ್ಬಲ ಎಂದು ನೀವು ಭಾವಿಸಬೇಡಿ. ಬಿಹಾರದಲ್ಲಿ ನನ್ನಷ್ಟು ಶುಲ್ಕವನ್ನು ಯಾರೂ ಕೇಳಿಲ್ಲ. ನಾನು ಕೇವಲ ಒಂದು ಚುನಾವಣೆಯಲ್ಲಿ ಯಾರಿಗಾದರೂ ಸಲಹೆ ನೀಡಿದರೆ ನನ್ನ ಶುಲ್ಕ 100 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚು ಇರುತ್ತದೆ. ಮುಂದಿನ ಎರಡು ವರ್ಷಗಳವರೆಗೆ ನಾನು ಅಂತಹ ಒಂದು ಚುನಾವಣಾ ಸಲಹೆಯೊಂದಿಗೆ ನನ್ನ ಪ್ರಚಾರವನ್ನು ನಡೆಸಬಹುದು ಎಂದು ಹೇಳಿದರು.

ಬೆಳಗಂಜ್ ಅಲ್ಲದೆ, ಇಮಾಮ್‌ಗಂಜ್, ರಾಮಗಢ ಮತ್ತು ತರಾರಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈಗ ಉಪಚುನಾವಣೆ ನಡೆಯಲಿದೆ.

 Prashant Kishor
ಕೇಂದ್ರ ಸರ್ಕಾರ ಇದನ್ನು ಮಾಡದೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com