ಪುಣೆ: ಪಟಾಕಿ ಸಿಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ನಡೆದಿದೆ.
ನವೆಂಬರ್ 1 ರಂದು ರಾವೆಟ್ ಪ್ರದೇಶದಲ್ಲಿ ನಡೆದ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ದೀಪಾವಳಿ ಹಿನ್ನೆಲೆಯಲ್ಲಿ ಸಂತ್ರಸ್ತ ಸೋಹಂ ಪಟೇಲ್ ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಆತನ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗೊಂಡು ಆತ ಮೃತಪಟ್ಟಿದ್ದು, ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರಾವೆಟ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದು, ಪೊಲೀಸರು ಬಂಧಿಸಲು ವಿಫಲವಾದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Advertisement