ಜಾರ್ಖಂಡ್: 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರಗಳನ್ನು ಸಲ್ಲಿಸಿದ 30 ನಾಯಕರನ್ನು ಬಿಜೆಪಿ ಇಂದು ಉಚ್ಚಾಟಿಸಿದೆ.
BJP
ಬಿಜೆಪಿonline desk
Updated on

ರಾಂಚಿ: ಜಾರ್ಖಂಡ್‌ನಲ್ಲಿ ತನ್ನ ನಾಯಕರ ಸಾಮೂಹಿಕ ವಲಸೆಯನ್ನು ತಡೆಗಟ್ಟಲು ಬಿಜೆಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮಂಗಳವಾರ ಬರೋಬ್ಬರಿ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರಗಳನ್ನು ಸಲ್ಲಿಸಿದ 30 ನಾಯಕರನ್ನು ಬಿಜೆಪಿ ಇಂದು ಉಚ್ಚಾಟಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದಂತೆ, ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಡಾ.ಪ್ರದೀಪ್ ವರ್ಮಾ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.

BJP
ಜಾರ್ಖಂಡ್ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, ಸಿಎಂ ಹೇಮಂತ್ ಸೊರೇನ್ ಆಪ್ತರಿಗೆ ಟಿಕೆಟ್!

ಪಕ್ಷದ ನೀತಿಗಳಿಗೆ ವಿರುದ್ಧವಾಗಿ ನಡೆದುಕೊಂಡ ಚಂದ್ರಮಾ ಕುಮಾರಿ, ಕುಂಕುಮ್ ದೇವಿ, ಜೂಲಿ ಯಾದವ್ ಸೇರಿದಂತೆ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com