ದೇವಾಲಯಕ್ಕೆ ಬಂದು ಕ್ಷಮೆಯಾಚಿಸು, ಇಲ್ಲವೇ 5 ಕೋಟಿ ರೂ. ಪಾವತಿಸು: ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ 'ಸಹೋದರ'ನಿಂದ ಮತ್ತೊಂದು ಬೆದರಿಕೆ!

ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ.
ನಟ ಸಲ್ಮಾನ್ ಖಾನ್.
ನಟ ಸಲ್ಮಾನ್ ಖಾನ್.
Updated on: 

ಮುಂಬೈ: ಗ್ಯಾಂಗ್ ​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್​ ಅವರಿಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಕೂಡ ಹೊಸ ಬೆದರಿಕೆ ಹಾಕಿದ್ದಾನೆ.

ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ.

ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್.
ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: 5 ಕೋಟಿ ಬೇಡಿಕೆ ಇಟ್ಟ ವ್ಯಕ್ತಿ ಬಂಧನ

ಬೆದರಿಕೆ ಹಾಕಿರುವ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬೆದರಿಕೆ ಸಂಬಂಧ ಅಧಿಕಾರಿಗಳು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಕ್ಟೋಬರ್​ 30ರಂದು ಅಪರಿಚಿತ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com