ಮಹಾರಾಷ್ಟ್ರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಸಂಜಯ್ ವರ್ಮಾ ನೇಮಕ

ವಿರೋಧ ಪಕ್ಷಗಳ ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸ್‌ ಮಹಾನಿರ್ದೇಶಕಿ(ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ಸಂಜಯ್ ವರ್ಮಾ
ಸಂಜಯ್ ವರ್ಮಾ
Updated on

ಮುಂಬೈ: ಮಹಾರಾಷ್ಟ್ರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷಗಳ ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸ್‌ ಮಹಾನಿರ್ದೇಶಕಿ(ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

ನಿನ್ನೆಯಷ್ಟೇ ರಶ್ಮಿ ಅವರನ್ನು ವರ್ಗಾವಣೆ ಮಾಡಿದ್ದ ಮಹಾರಾಷ್ಟ್ರ ಸರ್ಕಾರ ಇಂದು ಅವರಿಂದ ತೆರವಾದ ಸ್ಥಾನಕ್ಕೆ ಕಾನೂನು ಮತ್ತು ತಾಂತ್ರಿಕ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ವರ್ಮಾ ಅವರನ್ನು ನೇಮಕ ಮಾಡಿದೆ. ವರ್ಮಾ ಅವರು ಏಪ್ರಿಲ್ 2028 ರಲ್ಲಿ ನಿವೃತ್ತರಾಗಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂಜಯ್ ವರ್ಮಾ
ತಕ್ಷಣವೇ ಮಹಾರಾಷ್ಟ್ರ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ: ಕಾರಣ ಇಷ್ಟೇ...

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com