ನವದೆಹಲಿ: ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು, 'ಎಲ್ಲಾ ಖಾಸಗಿ ಆಸ್ತಿಗಳನ್ನು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದೆ.
ಖಾಸಗಿ ಆಸ್ತಿಯು ಸಮುದಾಯದ ಭೌತಿಕ ಸಂಪನ್ಮೂಲಗಳ ಭಾಗವಾಗಿರಬಹುದು. ಆದರೆ ವ್ಯಕ್ತಿಯ ಒಡೆತನದ ಪ್ರತಿಯೊಂದು ಸಂಪನ್ಮೂಲವು ಸಮುದಾಯದ ಭೌತಿಕ ಸಂಪನ್ಮೂಲಗಳ ಭಾಗವಾಗಿರುವುದು ಅನಿವಾರ್ಯವಲ್ಲ.
ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ ಆಸ್ತಿಯ ಭಾಗವಾಗಿ ಪರಿಗಣಿಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
ಸಮುದಾಯದ ಒಳಿತಿಗಾಗಿ ಕೆಲವು ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದಾದರೂ, ವ್ಯಕ್ತಿಯ ಒಡೆತನದ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ. ಯಾವುದೇ ಸರ್ಕಾರ ಖಾಸಗಿ ಆಸ್ತಿಯನ್ನು ಬಲವಂತವಾಗಿ ತೆಗೆದುಕೊಳ್ಳಲು ಬರಲ್ಲ. ಕೆಲವು ಖಾಸಗಿ ಆಸ್ತಿಗಳು ಸಮುದಾಯದ ಆಸ್ತಿಯಾಗಿರಬಹುದು.
ಅದನ್ನು ಸಮಾಜದ ಒಳಿತಿಗಾಗಿ ಸರ್ಕಾರವು ಸ್ವಾಧೀನಪಡಿಸಿಕೊಳ್ಳಬಹುದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠವು ಮಂಗಳವಾರ ತೀರ್ಪು ನೀಡಿದ್ದು, ಇದರ ಜೊತೆಯಲ್ಲಿಯೇ ಸಂವಿಧಾನದ 39 ಬಿ ವಿಧಿಯ ಅಡಿಯಲ್ಲಿ ವ್ಯಕ್ತಿಯ ಒಡೆತನದ ಖಾಸಗಿ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.
ನ್ಯಾಯಾಲಯ ತೀರ್ಪನ್ನು ಮೂರು ಭಾಗಗಳಾಗಿ ವಿಂಗಡಿಸಿದ್ದು, ಖಾಸಗಿ ಆಸ್ತಿಯು ಸಮುದಾಯದ ಸಮುದಾಯದ ಆಸ್ತಿಯಾಗಬಹುದು. ಆದರೆ ಒಬ್ಬ ವ್ಯಕ್ತಿಯ ಒಡೆತನದ ಪ್ರತಿಯೊಂದು ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.
ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ವರ್ಷದ ಮೇ 1 ರಂದು ವಿಚಾರಣೆ ನಡೆಸಿದ ನಂತರ ಸಂವಿಧಾನ ಪೀಠವು ಖಾಸಗಿ ಆಸ್ತಿ ಪ್ರಕರಣದ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದಿನ ಆರ್ಥಿಕ ರಚನೆಯಲ್ಲಿ ಖಾಸಗಿ ವಲಯಕ್ಕೆ ಪ್ರಾಮುಖ್ಯತೆ ಇದೆ ಎಂದು ಸಿಜೆಐ ಹೇಳಿದರು.
46 ವರ್ಷದ ಹಿಂದಿನ ತೀರ್ಪು ರದ್ದು
ಈ ತೀರ್ಪಿನೊಂದಿಗೆ, ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಹೇಳಿದ್ದ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ 1978 ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. 9 ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪಿನ ಮೂಲಕ 1978ರ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ರದ್ದುಗೊಳಿಸಿದೆ.
ಸಂವಿಧಾನದ 39 (ಬಿ) ವ್ಯಾಪ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. 1978ರಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ತೀರ್ಪು, ಖಾಸಗಿ ವ್ಯಕ್ತಿಗಳ ಎಲ್ಲಾ ಆಸ್ತಿಗಳನ್ನು ಸಮುದಾಯದ ಆಸ್ತಿ ಎಂದು ಕರೆಯಬಹುದು ಎಂದು ಅಭಿಪ್ರಾಯಪಟ್ಟಿತ್ತು
ವ್ಯಕ್ತಿಯ ಒಡೆತನದ ಪ್ರತಿಯೊಂದು ಸಂಪನ್ಮೂಲವನ್ನು ಸಮುದಾಯದ ವಸ್ತು ಸಂಪನ್ಮೂಲವೆಂದು ಪರಿಗಣಿಸಲಾಗುವುದಿಲ್ಲ ಎಂದು ನಾವು ನಂಬುತ್ತೇವೆ ಏಕೆಂದರೆ ಅದು ವಸ್ತು ಅಗತ್ಯಗಳಿಗೆ ಅರ್ಹವಾಗಿದೆ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.
ರಸ್ತೆ ಸಾರಿಗೆ ಸೇವೆಗಳ ರಾಷ್ಟ್ರೀಕರಣಕ್ಕೆ ಸಂಬಂಧಿಸಿದಂತೆ 1978 ರಲ್ಲಿ ಸುಪ್ರಿಂ ಕೋರ್ಟ್ ತೆಗೆದುಕೊಂಡ ಎರಡು ವ್ಯತಿರಿಕ್ತದ ನಿಲುವುಗಳಿಗೆ ಕುರಿತಾಗಿ ಪ್ರಸ್ತುತ ಪ್ರಕರಣದ ಉಲ್ಲೇಖ ಇದೆ. ಸುಪ್ರಸಿದ್ಧ ಕೇಶವಾನಂದ ಭಾರತಿ ಪ್ರಕರಣದಲ್ಲಿ ಎತ್ತಿ ಹಿಡಿದಿರುವ 31 ಸಿ ವಿಧಿ ಜಾರಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಸರ್ವಾನುಮತದಿಂದ ತೀರ್ಪು ನೀಡಿದೆ.
ಪ್ರಸ್ತುತ ಪ್ರಕರಣದ ಪ್ರಮುಖ ಅರ್ಜಿಯನ್ನು ಮುಂಬೈ ಮೂಲದ ಆಸ್ತಿ ಮಾಲೀಕರ ಸಂಘ (POA) 1992ರಲ್ಲಿ ಸಲ್ಲಿಸಿತು. ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರ (MHADA) ಕಾಯಿದೆಯ VIII-A ಅಧ್ಯಾಯವನ್ನು ಸಂಘ ವಿರೋಧಿಸಿತ್ತು. 70% ನಿವಾಸಿಗಳು ಪುನಃಸ್ಥಾಪನೆ ಉದ್ದೇಶಗಳಿಗಾಗಿ ಅಂತಹ ವಿನಂತಿಯನ್ನು ಮಾಡಿದರೆ, ಸೆಸ್ಡ್ ಕಟ್ಟಡಗಳು ಮತ್ತು ಅವುಗಳನ್ನು ನಿರ್ಮಿಸಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರದ ಅಧಿಕಾರಿಗಳಿಗೆ ಕಾಯಿದೆ ಅವಕಾಶ ಕಲ್ಪಿಸಿತ್ತು.
Advertisement