ಸಂವಿಧಾನ ವಿಧಿ 370 ಮರುಸ್ಥಾಪನೆ: ಜಮ್ಮು-ಕಾಶ್ಮೀರ ವಿಧಾನಸಭೆ ಅಂಗೀಕಾರ

ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು.
Jammu and Kashmir Chief Minister Omar Abdullah speaks on the second day of the J & K Legislative Assembly session
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ವಿಧಾನಸಭೆಯಲ್ಲಿ ಮಾತನಾಡಿದ ಸಂಗ್ರಹ ಚಿತ್ರ
Updated on

ಶ್ರೀನಗರ: ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ.

ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ಈ ನಿಬಂಧನೆಗಳನ್ನು ಮರುಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ತರಲು ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದವನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಯಾವುದೇ ಪ್ರಕ್ರಿಯೆಯು ರಾಷ್ಟ್ರೀಯ ಏಕತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ಅದು ಹೇಳಿದೆ.

ಉಪ ಮುಖ್ಯಮಂತ್ರಿ ಅವರು ನಿರ್ಣಯ ಮಂಡಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ತಮ್ಮ ಕುರ್ಚಿಯಿಂದ ಎದ್ದು ನಿಂತು ನಿರ್ಣಯವನ್ನು ಮಂಡಿಸುವುದನ್ನು ವಿರೋಧಿಸಿದರು. ಇದು ಈ ದಿನದ ಕಲಾಪ ಭಾಗವಲ್ಲ ಎಂದು ಅವರು ಹೇಳಿದರು.

ಬಿಜೆಪಿ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆ, ಸ್ಪೀಕರ್ ಅಬ್ದುರ್ ರಹೀಮ್ ರಾಥರ್ ಬಿಜೆಪಿ ನಾಯಕರೊಬ್ಬರಿಗೆ ಈ ವಿಷಯದ ಬಗ್ಗೆ ಮಾತನಾಡಲು ಹೇಳಿದರು. ಆದರೆ, ಬಿಜೆಪಿ ಸದಸ್ಯರು ಧರಣಿ ಹಾಗೂ ಘೋಷಣೆಗಳನ್ನು ಮುಂದುವರಿಸಿದರು.

ಪ್ರತಿಭಟನೆಯ ನಡುವೆಯೇ ಸಭಾಧ್ಯಕ್ಷರು, ‘ನೀವು ಮಾತನಾಡಲು ಬಯಸದಿದ್ದರೆ ಮತಕ್ಕೆ ಹಾಕುತ್ತೇನೆ’ ಎಂದರು. ಬಿಜೆಪಿ ಸದಸ್ಯರ ಪ್ರತಿಭಟನೆ ಮುಂದುವರಿದಾಗ ಸ್ಪೀಕರ್ ನಿರ್ಣಯವನ್ನು ಮತಕ್ಕೆ ಹಾಕಿದರು. ಬಿಜೆಪಿಯ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆಯೇ ಸದನದಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಸದನವನ್ನು ಮುಂದೂಡಿದ ನಂತರವೂ ಬಿಜೆಪಿ ಸದಸ್ಯರು "ಆಗಸ್ಟ್ 5 ಜಿಂದಾಬಾದ್", "ಜೈ ಶ್ರೀ ರಾಮ್", "ವಂದೇ ಮಾತರಂ", "ರಾಷ್ಟ್ರ ವಿರೋಧಿ ಅಜೆಂಡಾ ನಹೀ ಚಲೇಗಾ", "ಜಮ್ಮು ವಿರೋಧಿ ಅಜೆಂಡಾ ನಹೀ ಚಲೇಗಾ", ಮುಂತಾದ ಘೋಷಣೆಗಳನ್ನು ಕೂಗಿದರು.

ನಿರ್ಣಯ ಅಂಗೀಕರಿಸಿದ ನಂತರ ಸ್ಪೀಕರ್ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು. ಆಗಸ್ಟ್ 15, 2019 ರಂದು ಕೇಂದ್ರ ಸರ್ಕಾರವು ಸಂವಿಧಾನ ವಿಧಿ 370 ಮತ್ತು 35ಎಯನ್ನು ರದ್ದುಗೊಳಿಸಿತು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com