ಗುಜರಾತ್‌: ಬುಲೆಟ್ ಟ್ರೈನ್ ನಿರ್ಮಾಣ ಸ್ಥಳದಲ್ಲಿ ಸೇತುವೆ ಕುಸಿದು ಮೂವರ ಸಾವು

ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು.
Rescue operation underway after a temporary structure collapsed at a construction
ಬುಲೆಟ್ ಟ್ರೈನ್ ನಿರ್ಮಾಣ ಸ್ಥಳದಲ್ಲಿ ಸೇತುವೆ ಕುಸಿತ
Updated on

ಆನಂದ್: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದ ವಾಸದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ.

ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವುದನ್ನು ಆನಂದ್ನ ಪೊಲೀಸ್ ಅಧೀಕ್ಷಕ ಗೌರವ್ ಜಸಾನಿ ದೃಢಪಡಿಸಿದ್ದಾರೆ. ‘‘ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡ ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ’’ ಎಂದು ಅವರು ಹೇಳಿದ್ದಾರೆ. ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು’’ ಎಂದು ಆನಂದ್ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಝರ್ಗಳನ್ನು ಬಳಸಿಕೊಂಡು ಅವಶೇಶಗಳನ್ನು ತೆರವುಗೊಳಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

Rescue operation underway after a temporary structure collapsed at a construction
ಬಿಹಾರ: 1600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com