ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಪುಣೆ ನಗರದ ಕರ್ವೇನಗರ ಪ್ರದೇಶದ ನಿವಾಸಿಗಳಾದ ಆದಿತ್ಯ ಗುಲಂಕರ್(22) ಮತ್ತು ರಫೀಕ್ ನಿಯಾಜ್ ಶೇಖ್(22) ಅವರನ್ನು ಇಂದು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳಲ್ಲಿ ಒಬ್ಬರಾದ ಪ್ರವೀಣ್ ಲೋಂಕರ್ ಮತ್ತು ಇನ್ನೊಬ್ಬ ಆರೋಪಿ ರೂಪೇಶ್ ಮೊಹೋಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.
ಈಗಾಗಲೇ ಬಂಧಿತರಾಗಿರುವ ಲೋಂಕರ್ ಮತ್ತು ಮೊಹೋಲ್ ಅವರು ಗುಲಾಂಕರ್ ಮತ್ತು ಶೇಖ್‌ಗೆ ಮದ್ದುಗುಂಡುಗಳೊಂದಿಗೆ 9 ಎಂಎಂ ಪಿಸ್ತೂಲ್ ಅನ್ನು ಹಸ್ತಾಂತರಿಸಿದ್ದಾರೆ. ಅದನ್ನು ಕೃತ್ಯಕ್ಕೆ ಬಳಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮದ್ದುಗುಂಡುಗಳನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿರುವಾಗಲೇ ತನಿಖೆಯ ವೇಳೆ ಪಿಸ್ತೂಲ್ ಪತ್ತೆಯಾಗಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕ್(66) ಅವರನ್ನು ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಮೂವರು ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು.
Advertisement