ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೇಂದ್ರ ಸರ್ಕಾರ ಕಠಿಣ ಕ್ರಮ; ತ್ಯಾಜ್ಯ ಸುಡುವ ರೈತರಿಗೆ ದುಪ್ಪಟ್ಟು ದಂಡ!

ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ನಂತರ ಮತ್ತು ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ಕೃಷಿ ತ್ಯಾಜ್ಯ ಸುಡುವ ರೈತರಿಗೆ ವಿಧಿಸುವ ದಂಡದ ಪ್ರಮಾಣವನ್ನು ದುಪ್ಪಟ್ಟುಗೊಳಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನವೆಂಬರ್ 6 ರಂದು ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಗಾಗಿ ಅಧಿಸೂಚನೆ ಹೊರಡಿಸಿದ್ದು, ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.

ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ. ಎರಡರಿಂದ ಐದು ಎಕರೆ ಹೊಂದಿರುವವರು 10,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರು ಭತ್ತದ ತ್ಯಾಜ್ಯವನ್ನು ಸುಟ್ಟರೆ 30,000 ರೂ. ಪಾವತಿಸಬೇಕಾಗುತ್ತದೆ.

ಸಾಂದರ್ಭಿಕ ಚಿತ್ರ
ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಪಟಾಕಿ ನಿಷೇಧ ಸರಿಯಾಗಿ ಜಾರಿಗೆ ಬಂದಿಲ್ಲ- ಸುಪ್ರೀಂ ಕೋರ್ಟ್ ಆಕ್ರೋಶ

ಈ ಹಿಂದೆ ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ 2,500 ರೂ., ಎರಡರಿಂದ ಐದು ಎಕರೆ ಹೊಂದಿರುವವರಿಗೆ 5,000 ರೂ. ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು ಹುಲ್ಲು ಸುಟ್ಟರೆ 15,000 ರೂ. ದಂಡ ವಿಧಿಸಲಾಗುತ್ತಿತ್ತು.

ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ತ್ಯಾಜ್ಯಗಳನ್ನು ಸುಡುವ ಘಟನೆಗಳ ಸಂಖ್ಯೆಯು ಹೆಚ್ಚಾದರೆ ನವೆಂಬರ್ 1 ರಿಂದ 15 ರವರೆಗೆ ದೆಹಲಿಯು ಗರಿಷ್ಠ ಮಟ್ಟದ ಮಾಲಿನ್ಯವನ್ನು ಅನುಭವಿಸುತ್ತದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ವಿಶ್ಲೇಷಣೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com