ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಹತ್ಯೆ

ಎನ್‌ಕೌಂಟರ್ ನಡೆದ ಸ್ಥಳದಿಂದ ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ನಾಲ್ಕು ಎಕೆ ರೈಫಲ್ ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಲೋಲಾಬ್‌ನ ಮಾರ್ಗಿ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬುಧವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್ ಗೆ ತಿರುಗಿತು ಎಂದು ಅವರು ಹೇಳಿದ್ದಾರೆ.

ಎನ್‌ಕೌಂಟರ್ ನಡೆದ ಸ್ಥಳದಿಂದ ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ನಾಲ್ಕು ಎಕೆ ರೈಫಲ್ ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಉಗ್ರರಿಗೆ ಆಶ್ರಯ ನೀಡುವವರ ಮನೆಗಳು ನೆಲಸಮ; ಲೆಫ್ಟಿನೆಂಟ್ ಗವರ್ನರ್ ಖಡಕ್ ಎಚ್ಚರಿಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com