ಜಮ್ಮು-ಕಾಶ್ಮೀರ: ಹತ್ಯೆಯಾದ ವಿಡಿಜಿಗಳ ಮೃತದೇಹ ಪತ್ತೆ; ಕಿಶ್ತ್ವಾರ್‌ನಲ್ಲಿ ಉಗ್ರರಿಗಾಗಿ ಶೋಧ

ವಿಡಿಜಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಿಶ್ತ್ವಾರ್‌ನಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಿಶ್ತ್ವಾರ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಬೃಹತ್ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಂದ ಹತರಾದ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ(ವಿಡಿಜಿ)ಗಳ ಮೃತದೇಹಗಳು ನದಿಯ ಬಳಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಜಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಿಶ್ತ್ವಾರ್‌ನಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಉಗ್ರರು, ಇಬ್ಬರು ವಿಡಿಜಿಗಳನ್ನು ಕಿಶ್ತ್ವಾರ್ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಅಪಹರಿಸಿದ ನಂತರ ಗುರುವಾರ ಹತ್ಯೆ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಜಿಲ್ಲೆಯ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ ಅಪಹರಿಸಿ ಹತ್ಯೆಗೈದ ಭಯೋತ್ಪಾದಕರು

ಕೇಶ್ವಾನ್ ಬೆಲ್ಟ್‌ನ ಪಾಂಡ್‌ಗ್ವಾರಿ ಪ್ರದೇಶದ ನದಿಯ ಬಳಿ ವಿಡಿಜಿಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಇತರ ನಾಯಕರು ಉಗ್ರರ ಕೃತ್ಯವನ್ನು ಖಂಡಿಸಿದ್ದು, ಭೀಕರ ಹತ್ಯೆಗಳ ನಂತರ ದಟ್ಟ ಅರಣ್ಯ ಪ್ರದೇಶದಲ್ಲಿ ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಒಳಗೊಂಡ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com