ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರು ಉಗ್ರರನ್ನು ಮಟ್ಟ ಹಾಕಲಾಗಿದ್ದು, ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಖರ ಮಾಹಿತಿ ಪಡೆದ ನಂತರ ಗುರುವಾರ ಸಂಜೆ ಎನ್ ಕೌಂಟರ್ ಆರಂಭವಾಗಿತ್ತು.
Advertisement