ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ.
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಸೂರು-ಬಸಗುಡ-ಪಾಮೆಡ್ ಗ್ರಾಮಗಳ ಟ್ರೈ-ಜಂಕ್ಷನ್‌ನಲ್ಲಿರುವ ಕಾಡಿನಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ. ಅವರು ತಿಳಿಸಿದ್ದಾರೆ.

ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ಮತ್ತು ಕೋಬ್ರಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
ಛತ್ತೀಸ್‌ಗಢ: ಸುಕ್ಮಾದಲ್ಲಿ ಇಬ್ಬರು ಪೊಲೀಸರ ಮೇಲೆ ಮಾವೋವಾದಿಗಳ ದಾಳಿ, ಶಸ್ತ್ರಾಸ್ತ್ರಗಳೊಂದಿಗೆ ಪರಾರಿ

ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಇಬ್ಬರು ನಕ್ಸಲರ ಮೃತ ದೇಹಗಳನ್ನು ಮತ್ತು ಸ್ವಯಂ-ಲೋಡಿಂಗ್ ರೈಫಲ್(ಎಸ್‌ಎಲ್‌ಆರ್), ಬ್ಯಾರೆಲ್ ಗ್ರೆನೇಡ್ ಲಾಂಚರ್ ಶೆಲ್‌ಗಳು, ಸ್ಥಳೀಯವಾಗಿ ತಯಾರಿಸಿದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 191 ನಕ್ಸಲೀಯರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com