ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಜಿಲ್ಲೆಯ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ ಅಪಹರಿಸಿ ಹತ್ಯೆಗೈದ ಭಯೋತ್ಪಾದಕರು

ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಹತ್ಯೆಯಾದ ಸಿಬ್ಬಂದಿ. ಅವರು ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ ರಕ್ಷಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಾಪಿಸಿದ ಗ್ರಾಮ ರಕ್ಷಣಾ ಸಮಿತಿಯ ಸದಸ್ಯರಾಗಿದ್ದರು.
File image
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು (ವಿಡಿಜಿ) ಅಪಹರಿಸಿದ ಭಯೋತ್ಪಾದಕರು ಗಲ್ಲಿಗೇರಿಸಿದ್ದಾರೆ.

ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಹತ್ಯೆಯಾದ ಸಿಬ್ಬಂದಿ. ಅವರು ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ ರಕ್ಷಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಾಪಿಸಿದ ಗ್ರಾಮ ರಕ್ಷಣಾ ಸಮಿತಿಯ ಸದಸ್ಯರಾಗಿದ್ದರು.

ಇಬ್ಬರು ವ್ಯಕ್ತಿಗಳು ಅಧ್ವಾರಿ ಪ್ರದೇಶದ ಮುಂಜ್ಲಾ ಧಾರ್ ಅರಣ್ಯದಲ್ಲಿ ದನ ಮೇಯಿಸಲು ಹೋಗಿದ್ದರು ಆದರೆ ವಾಪಸಾಗಿರಲಿಲ್ಲ, ಹೀಗಾಗಿ ಅವರನ್ನು ಅಪಹರಿಸಿದ್ದಾರೆ ಎಂಬ ಅನುಮಾನ ಮೂಡಿತು. ಸಂತ್ರಸ್ತರ ಕುಟುಂಬ ಸದಸ್ಯರು ಅಪಹರಣವನ್ನು ದೃಢಪಡಿಸಿದರು, ಕುಲದೀಪ್ ಕುಮಾರ್ ಅವರ ಸಹೋದರ ಪೃಥ್ವಿ, ಅವರ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. "ನನ್ನ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಅಪಹರಿಸಿ ಕೊಂದಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ ಎಂದು ಪೃಥ್ವಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನೆಯಿಂದ ದೊಡ್ಡಮಟ್ಟದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪಿನ ಒಂದು ಶಾಖೆಯಾದ ಕಾಶ್ಮೀರ ಟೈಗರ್ಸ್ ಹತ್ಯೆಯ ಹೊಣೆ ಹೊತ್ತುಕೊಂಡಿತು. ಅವರು ಸಂತ್ರಸ್ತರ ದೇಹಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ಶ್ರೀನಗರದ ಸಂಡೇ ಮಾರ್ಕೆಟ್‌ನಲ್ಲಿ ಗ್ರೆನೇಡ್ ದಾಳಿ ನಡೆದ ಕೆಲವು ದಿನಗಳ ನಂತರ ಈ ಕ್ರೂರ ಹತ್ಯೆಗಳು ನಡೆದಿದೆ. ಗ್ರೇನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ. ಕಿಶ್ತ್ವಾರ್ ದಾಳಿಯ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ತಮ್ಮ ಪ್ರಯತ್ನಗಳನ್ನು ಮುಂದುವರೆಸಿದ್ದಾರೆ, ಸ್ಥಳೀಯ ಪೊಲೀಸರು ಭಯೋತ್ಪಾದಕರನ್ನು ಪತ್ತೆಹಚ್ಚಲು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

File image
ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಹತ್ಯೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com