ತೆಲಂಗಾಣ: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 8 ಕಾರುಗಳು ಸುಟ್ಟು ಭಸ್ಮವಾಗಿವೆ.
ಜಹೀರಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯಾಹ್ನ 1.30 ರಿಂದ 2 ಗಂಟೆ ನಡುವೆ ಈ ಘಟನೆ ನಡೆದಿದ್ದು, ಚಾಲಕನಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣ ಮೂರು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ದೇಹದ ಶೇ. 20 ರಷ್ಟು ಸುಟ್ಟಗಾಯಗಳಿಂದ ನರಳುತ್ತಿದ್ದ ಲಾರಿ ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರುಗಳನ್ನು ಗುಜರಾತ್‌ನಿಂದ ಹೈದರಾಬಾದ್‌ಗೆ ಸಾಗಿಸಲಾಗುತ್ತಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement