ಮುಂಬೈ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ 'ಸಂಕಲ್ಪ ಪತ್ರ' ಪ್ರಣಾಳಿಕೆಯನ್ನು ಕೇಂದ್ರ ಸಚಿವ ಅಮಿತ್ ಶಾ ಭಾನುವಾರ ಮುಂಬೈನಲ್ಲಿ ಬಿಡುಗಡೆ ಮಾಡಿದರು.
ಮುಂದಿನ ಐದು ವರ್ಷಗಳಲ್ಲಿ ಯುವಕರಿಗೆ 25 ಲಕ್ಷ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ರೈತರ ಸಾಲ ಮನ್ನಾ ಜೊತೆಗೆ ಲಡ್ಕಿ ಬಹಿನ್ ಯೋಜನಾ ಭತ್ಯೆಯನ್ನು 1,500 ರಿಂದ 2,100 ಕ್ಕೆ ಹೆಚ್ಚಿಸುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದರು.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಪಕ್ಷದ ಹಿರಿಯ ನಾಯಕರೊಂದಿಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಣಾಳಿಕೆ ಬಿಡುಗಡೆಯ ಸಂದರ್ಭದಲ್ಲಿ, ಫಡ್ನವೀಸ್ ಅವರು ಬಿಜೆಪಿ ಚುನಾವಣಾ ಪ್ರಣಾಳಿಕೆಯು "ವಿಕಸಿತ ಮಹಾರಾಷ್ಟ್ರಕ್ಕಾಗಿ ವಿಕಸಿತ್ ಭಾರತ" ಮಾಡುವ ಮಾರ್ಗಸೂಚಿಯಾಗಿದೆ ಎಂದು ಹೇಳಿದರು.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅಮಿತ್ ಶಾ, ದೇಶದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ ಅವರ ಭರವಸೆಗಳು ಸಿದ್ಧಾಂತವನ್ನು ಅವಮಾನಿಸುತ್ತವೆ, ತುಷ್ಟೀಕರಣವನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿದರು.
ಕಾಂಗ್ರೆಸ್ ಈಗ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನೀಡಿದ ಚುನಾವಣಾ ಪೂರ್ವ ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ. ಮಹಾ ವಿಕಾಸ್ ಅಘಾಡಿಗೆ ಯಾವುದೇ ವಿಶ್ವಾಸಾರ್ಹತೆ ಇಲ್ಲ ಎಂದರು. ಇದಲ್ಲದೆ ಕೇಸರಿ ಪಕ್ಷವು ದೇಶದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಲೋಕಸಭೆಯಲ್ಲಿ ವಿರೋಧ ಪಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಶಾ, “ವೀರ್ ಸಾವರ್ಕರ್ ಬಗ್ಗೆ ಎರಡು ಒಳ್ಳೆಯ ಮಾತುಗಳನ್ನು ಹೇಳಲು ಉದ್ಧವ್ ಠಾಕ್ರೆ ರಾಹುಲ್ ಗಾಂಧಿಗೆ ಮನವಿ ಮಾಡಬಹುದೇ ಎಂದು ಪ್ರಶ್ನಿಸಿದರು.
Advertisement