ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ಖಚಿತ ಮಾಹಿತಿಯ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.
ಭದ್ರತಾಪಡೆಗಳು ಹತ್ತಿರ ಬರುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ದಿಟ್ಟ ಉತ್ತರ ನೀಡಿದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹತ್ಯೆಯಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿಸಿದ್ದಾರೆ.
Advertisement