ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ

ರಾಜ್ಯದಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಇನ್ನೂ ನಡೆಯುತ್ತಿವೆ. ಆದರೆ ಇದು ಕಳೆದ ಹಲವಾರು ತಿಂಗಳುಗಳಲ್ಲಿ ಭಯೋತ್ಪಾದಕರ ಹತ್ಯೆಯ ಅತಿದೊಡ್ಡ ಘಟನೆಯಾಗಿದೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಇಂಫಾಲ: ಮಣಿಪುರದಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಸಾಧಿಸಿವೆ. ಮಣಿಪುರದ ಜಿರಿಬಾಮ್ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ ಎನ್‌ಕೌಂಟರ್‌ನಲ್ಲಿ 11 ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ. ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್ ಯೋಧ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನು ದೊಡ್ಡ ಯಶಸ್ಸು ಎಂದು ನೋಡಲಾಗುತ್ತಿದೆ. ಮಾಹಿತಿಯ ಪ್ರಕಾರ, ಶಿಬಿರದ ಮೇಲೆ ದಾಳಿ ಮಾಡಿದ ನಂತರ ಭಯೋತ್ಪಾದಕ ವಿರುದ್ಧ ಸಿಆರ್‌ಪಿಎಫ್ ಕಾರ್ಯಾಚರಣೆ ಕೈಗೊಂಡಿದ್ದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಇಂಫಾಲ್‌ನ ಮೈತೇಯಿ ಮತ್ತು ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಕುಕಿಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಇನ್ನೂ ನಡೆಯುತ್ತಿವೆ. ಆದರೆ ಇದು ಕಳೆದ ಹಲವಾರು ತಿಂಗಳುಗಳಲ್ಲಿ ಭಯೋತ್ಪಾದಕರ ಹತ್ಯೆಯ ಅತಿದೊಡ್ಡ ಘಟನೆಯಾಗಿದೆ.

ಭಯೋತ್ಪಾದಕರು ಸಿಆರ್‌ಪಿಎಫ್ ಶಿಬಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಉದ್ದೇಶಕ್ಕಾಗಿಯೇ ಅವರು ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದರು. ಆದರೆ ಸಿಆರ್‌ಪಿಎಫ್‌ನ ಕಟ್ಟುನಿಟ್ಟಿನ ಕ್ರಮದಲ್ಲಿ 11 ಶಂಕಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಮೂಲಗಳ ಪ್ರಕಾರ, ಜಿರಿಬಾಮ್‌ನಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರಗಾಮಿಗಳು ಹತರಾಗಿದ್ದಾರೆ.

ಪ್ರತ್ಯಕ್ಷ ದೃಶ್ಯ
ಮಣಿಪುರ: ರಾಕೆಟ್, ಮಾರ್ಟರ್ ಗಳನ್ನು ವಶಕೆ ಪಡೆದ ಸೇನೆ, 8 ಮಂದಿ UNLF-P ಸದಸ್ಯರ ಬಂಧನ

ಮೂಲಗಳ ಪ್ರಕಾರ ಶಂಕಿತ ಉಗ್ರರು ಇಂದು ಮಧ್ಯಾಹ್ನ 2.30ರ ಸುಮಾರಿಗೆ ಜಿರಿಬಾಮ್ ಜಿಲ್ಲೆಯ ಬೊರೊಬೆಕರ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಶಂಕಿತ ಕುಕಿ ಉಗ್ರರು ಎರಡೂ ಕಡೆಯಿಂದ ಪೊಲೀಸ್ ಠಾಣೆ ಮೇಲೆ ಭಾರಿ ದಾಳಿ ನಡೆಸಿದ್ದರು. ಅದರ ನಂತರ ಈ ಎನ್ಕೌಂಟರ್ ಪ್ರಾರಂಭವಾಯಿತು. ಇದಾದ ನಂತರ ಭದ್ರತಾ ಪಡೆಗಳು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದರು. ಸಿಆರ್‌ಪಿಎಫ್ ನೇತೃತ್ವದ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ 11 ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಠಾಣೆ ಬಳಿ ನಿರಾಶ್ರಿತರಿಗೆ ಪರಿಹಾರ ಶಿಬಿರವೂ ಇದೆ. ಈ ಶಿಬಿರವೂ ಭಯೋತ್ಪಾದಕರ ಗುರಿಯಾಗಿರಬಹುದು ಎಂದು ನಂಬಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com