ಕೆಲವರು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ; ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ

ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೊಂದಿಗೆ ಸೇರಬೇಕೆಂದು ಮೋದಿ ವಿನಂತಿಸಿದರು.
Narendra Modi
ನರೇಂದ್ರ ಮೋದಿ
Updated on

ಅಹಮದಾಬಾದ್: ಕೆಲವರು ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಅವುಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಏಕತೆ ಮತ್ತು ಸಮಗ್ರತೆಯ ಅಗತ್ಯವನ್ನು ಒತ್ತಿ ಹೇಳಿದರು.

ನಿಮಿತ್ತ ಗುಜರಾತ್‌ನ ಖೇಡಾ ಜಿಲ್ಲೆಯ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವ ಪ್ರಯುಕ್ತ ಭಕ್ತ ಸಮೂಹವನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನಾಗರಿಕರ ನಡುವೆ ಏಕತೆ ಮತ್ತು ರಾಷ್ಟ್ರದ ಸಮಗ್ರತೆ ಮುಖ್ಯವಾಗಿದೆ.

ಆದರೆ, ದುರದೃಷ್ಟವಶಾತ್, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಥವಾ ಅವರ ಸಂಕುಚಿತ ಮನೋಭಾವದಿಂದಾಗಿ ನಮ್ಮ ಸಮಾಜವನ್ನು ಜಾತಿ, ಧರ್ಮ, ಭಾಷಾವಾರು, ಪುರುಷರು-ಮಹಿಳೆ, ಗ್ರಾಮ-ನಗರ ಎಂದು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶಗಳನ್ನು ಅರ್ಥಮಾಡಿಕೊಳ್ಳಬೇಕು. ಅವರನ್ನು ಸೋಲಿಸಲು ಒಂದಾಗಬೇಕು ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೊಂದಿಗೆ ಸೇರಬೇಕೆಂದು ಮೋದಿ ವಿನಂತಿಸಿದರು.

ವಡ್ತಲ್‌ನ ಸ್ವಾಮಿನಾರಾಯಣ ದೇವಾಲಯದ 200 ವರ್ಷಗಳ ಸ್ಮರಣಾರ್ಥ ಭಾರತ ಸರ್ಕಾರವು ನಾಣ್ಯವನ್ನು ಬಿಡುಗಡೆ ಮಾಡಿರುವುದು ನನಗೆ ಸಂತೋಷ ತಂದಿದೆ. ನಮ್ಮ ಇತಿಹಾಸದ ಕಷ್ಟದ ಸಮಯದಲ್ಲಿ ಸ್ವಾಮಿನಾರಾಯಣ ಬಂದು ನಮಗೆ ಹೊಸ ಶಕ್ತಿಯನ್ನು ನೀಡಿದ್ದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com