ಮಣಿಪುರ: ಭೀಕರ ಗುಂಡಿನ ಚಕಮಕಿ; ಜಿರಿಬಾಮ್ ನಲ್ಲಿ ಎರಡು ಮೃತದೇಹ ಪತ್ತೆ; ನಿಷೇಧಾಜ್ಞೆ ಜಾರಿ

ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ನಿನ್ನೆ ಶಂಕಿತ ಉಗ್ರಗಾಮಿಗಳು ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಇಂಫಾಲ್: ಮಣಿಪುರ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಇಬ್ಬರು ವೃದ್ಧರ ಮೃತದೇಹಗಳು ಪತ್ತೆಯಾಗಿದೆ. ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಿನ್ನೆ ತೀವ್ರ ಗುಂಡಿನ ಕಮಕಿ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ನಿನ್ನೆ ಶಂಕಿತ ಉಗ್ರಗಾಮಿಗಳು ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಕುರಾಧೋರ್ ಕರೋಂಗ್ ಪ್ರದೇಶದಲ್ಲಿ ದಂಗೆಕೋರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ನಂತರ ಇಬ್ಬರು ವೃದ್ಧರು ಮೃತಪಟ್ಟಿದ್ದಾರೆ. ಐವರು ನಾಪತ್ತೆಯಾಗಿರುವುದರಿಂದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಂಕಿತ ದಂಗೆಕೋರರ ಹತ್ಯೆಯನ್ನು ವಿರೋಧಿಸಿ ಬೆಟ್ಟಗಳ ಕುಕಿ-ಜೋ ಬಹುಸಂಖ್ಯಾತ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 5 ಗಂಟೆಯಿಂದ ಬಂದ್ ಆಚರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಭದ್ರತಾ ಪಡೆಗಳೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ ಹನ್ನೊಂದು ಶಂಕಿತ ಉಗ್ರರು ಹತರಾಗಿದ್ದರು.

ಬೊರೊಬೆಕ್ರಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೂ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ದಾಳಿಯ ಸರಣಿಯಲ್ಲಿ, ಶಂಕಿತ ಉಗ್ರಗಾಮಿಗಳು ಜಕುರಾಡೋರ್ ಕರೋಂಗ್ ಮಾರುಕಟ್ಟೆಯ ಸುತ್ತಮುತ್ತಲಿನ ಹಲವಾರು ಅಂಗಡಿಗಳು ಮತ್ತು ಮನೆಗಳನ್ನು ಸುಟ್ಟು ಹಾಕಿದ್ದಾರೆ, ಜೊತೆಗೆ ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಅದರ ಪಕ್ಕದಲ್ಲಿರುವ ಸಿಆರ್‌ಪಿಎಫ್ ಶಿಬಿರವನ್ನು ಸುಟ್ಟು ಹಾಕಿದ್ದಾರೆ.

Representational image
ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ

ಭದ್ರತಾ ಪಡೆಗಳು ಪ್ರತಿದಾಳಿ ನಡೆಸುತ್ತಿದ್ದಂತೆ, ಭಾರೀ ಗುಂಡಿನ ಚಕಮಕಿ ಆರಂಭವಾಗಿ ನಿನ್ನೆ 11 ಶಂಕಿತ ಉಗ್ರರು ಹತರಾದರು. ಸುಮಾರು 45 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರನ್ನು ಹೊಡೆದುರುಳಿಸುವ ಕಾರ್ಯಾಚರಣೆ ಮುಂದುವರಿದಿದ್ದು, ಅಸ್ಸಾಂ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಪೊಲೀಸರನ್ನೊಳಗೊಂಡ ಬಲವರ್ಧನೆ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ವಿವಿಧ ಗ್ರಾಮಗಳಿಂದ ಹಿಂಸಾತ್ಮಕ ಘರ್ಷಣೆಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com