ವಯನಾಡು ಲೋಕಸಭಾ ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ಭವಿಷ್ಯ ಇಂದು ನಿರ್ಧಾರ

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ವದ್ರಾ ಮೊಟ್ಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.
Priyanka Gandhi Vadra
ಪ್ರಿಯಾಂಕಾ ಗಾಂಧಿ ವಾದ್ರಾ
Updated on

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಮುಂಜಾನೆ 7ಕ್ಕೆ ಆರಂಭವಾಗಿದ್ದು, ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿರುವ ಪ್ರಿಯಾಂಕಾ ಗಾಂಧಿ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ವದ್ರಾ ಮೊಟ್ಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಪ್ರಿಯಾಂಕಾ ಅವರ ಸಹೋದರ ರಾಹುಲ್ ಗಾಂಧಿಯವರು ರಾಯಬರೇಲಿ ಕ್ಷೇತ್ರದಿಂದಲೂ ಆಯ್ಕೆಯಾದ ಹಿನ್ನೆಲೆಯಲ್ಲಿ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.

ಪ್ರಿಯಾಂಕಾ ವಿರುದ್ಧ ಎಲ್ಡಿಎಫ್ನ ಸತ್ಯನ್ ಮೊಕೇರಿ ಮತ್ತು ಎನ್ಡಿಎಯ ನವ್ಯ ಹರಿದಾಸ್ ಹಾಗೂ ಇತರ 13 ಮಂದಿ ಅಭ್ಯರ್ಥಿಗಳಿದ್ದಾರೆ. 2019ರ ಚುನಾವಣೆಯಲ್ಲಿ ರಾಹುಲ್ 4.3 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರೆ, ಕಳೆದ ಬಾರಿ ವಿಜಯದ ಅಂತರ 3.5 ಲಕ್ಷಕ್ಕೆ ಕುಸಿದಿತ್ತು.

Priyanka Gandhi Vadra
ಪ್ರಿಯಾಂಕಾ ಗಾಂಧಿ ದೇಶದ ಭವಿಷ್ಯದ ನಾಯಕಿ: ವಯನಾಡು ಪ್ರಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿಕೆ

ಮತದಾನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿಯವರ, ನನ್ನ ಪ್ರೀತಿಯ ಸಹೋದರಿ, ಸಹೋದರರೇ, ದಯವಿಟ್ಟು ಇಂದು ಮತ ಚಲಾಯಿಸಿ, ಇದು ನಿಮ್ಮ ದಿನವಾಗಿದೆ. ನಮ್ಮ ಸಂವಿಧಾನವು ನಿಮಗೆ ನೀಡಿದ ಮಹಾನ್ ಅಧಿಕಾರವನ್ನು ಚಲಾಯಿಸುವ ದಿನ. ನಾವು ಒಟ್ಟಾಗಿ ಉತ್ತಮ ಭವಿಷ್ಯವನ್ನು ನಿರ್ಮಿಸೋಣ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com