ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಶನಿವಾರ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಉತ್ತರ ಅಬುಜ್ಮದ್‌ನ ಕಾಡಿನಲ್ಲಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.
ಗಡಿ ಭದ್ರತಾ ಪಡೆ(ಬಿಎಸ್‌ಎಫ್), ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್(ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅವರು ತಿಳಿಸಿದ್ದಾರೆ.
ಸ್ಥಳದಿಂದ ಇದುವರೆಗೆ ಐವರು ನಕ್ಸಲೀಯರ ಮೃತದೇಹಗಳು ಮತ್ತು ಬಂದೂಕುಗಳ ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ರಾಜಧಾನಿ ರಾಯ್‌ಪುರಕ್ಕೆ ಸ್ಥಳಾಂತರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement