ಝಾನ್ಸಿ ಆಸ್ಪತ್ರೆ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ.
PM Modi
ಪ್ರಧಾನಿ ಮೋದಿ
Updated on

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಸಂಭವಿಸಿದ ಅಗ್ನಿ ದುರಂತ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿತ್ತು, ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಉತ್ತರಪ್ರದೇಶ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ಮಕ್ಕಳ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು ಶನಿವಾರ ಸಂಜೆಯೊಳಗೆ ವರದಿ ನೀಡುವಂತೆ ಆದೇಶಿಸಿದ್ದಾರೆ. ಜೊತೆಗೆ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿವೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com