ಮುಂಬೈ: ಸಂವಿಧಾನ ದೇಶದ ಡಿಎನ್ಎ ಎಂಬುದನ್ನು ತಮ್ಮ ಪಕ್ಷ ನಂಬುತ್ತದೆ, ಆದರೆ ಬಿಜೆಪಿ ಹಾಗೂ ಆರ್ ಎಸ್ಎಸ್ ಗೆ ಅದು ಕೇವಲ ಖಾಲಿ ಪುಸ್ತಕ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪೂರ್ವ ಮಹಾರಾಷ್ಟ್ರದಲ್ಲಿ ಚುನಾವಣಾ ಅಭಿಯಾನವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಆದಂತೆ ಶಾಸಕರನ್ನು ಖರೀದಿಸಿ ರಾಜ್ಯ ಸರ್ಕಾರಗಳನ್ನು ಉರುಳಿಸಬಹುದು ಹಾಗೂ ಉನ್ನತ ಉದ್ಯಮಿಗಳ ಸಾಲ ಮನ್ನಾ ಮಾಡಬೇಕೆಂಬುದನ್ನು ಸಂವಿಧಾನದಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಂವಿಧಾನವನ್ನು ದೇಶದ ಡಿಎನ್ಎ ಎಂದು ಕಾಂಗ್ರೆಸ್ ಪರಿಗಣಿಸುತ್ತದೆ, ಆದರೆ ಆರ್ ಎಸ್ಎಸ್ ಹಾಗೂ ಬಿಜೆಪಿಗೆ ಅದು ಕೇವಲ ಖಾಲಿ ಪುಸ್ತಕ ಎಂದು ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ತನ್ನ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ನಾಯಕರು ಖಾಲಿ ಪುಟಗಳಿರುವ ಸಂವಿಧಾನದ ಪ್ರತಿಯನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದ ನೀಡಿದ ನಂತರ ರಾಹುಲ್ ಗಾಂಧಿಯಿಂದ ಈ ಪ್ರತಿಕ್ರಿಯೆ ಬಂದಿದೆ.
“ನಾನು ಪ್ರಸ್ತಾಪಿಸುತ್ತಿರುವ ಅದೇ ವಿಷಯದ ಬಗ್ಗೆ ಈ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ ಎಂದು ನನ್ನ ಸಹೋದರಿ ಹೇಳಿದ್ದರು, ನಾನು ಲೋಕಸಭೆಯಲ್ಲಿ ಜಾತಿ ಗಣತಿ ನಡೆಸಬೇಕು ಮತ್ತು ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕಬೇಕು ಎಂದು ಹೇಳಿದ್ದೆ. ಈಗ ಅವರು ತಮ್ಮ ಚುನಾವಣಾ ರ್ಯಾಲಿಗಳಲ್ಲಿ ನಾನು ಮೀಸಲಾತಿಯನ್ನು ವಿರೋಧಿಸುತ್ತೇನೆ ಎಂದು ಹೇಳುತ್ತಿದ್ದಾರೆ, ಅವರು ಅಮೆರಿಕದ ಮಾಜಿ ಅಧ್ಯಕ್ಷರಂತೆ ಸ್ಮರಣಶಕ್ತಿ ಕಳೆದುಕೊಳ್ಳುತ್ತಿದ್ದಾರೆ" ಎಂದು ರಾಹುಲ್ ಟೀಕಾ ಪ್ರಹಾರ ನಡೆಸಿದ್ದಾರೆ.
"ನಾನು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿಂತಿದ್ದರಿಂದ ನಮ್ಮ ಪ್ರತಿಪಕ್ಷಗಳು ನನ್ನ ಪ್ರತಿಷ್ಠೆಯನ್ನು ಹಾಳುಮಾಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ" ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೋಟು ಅಮಾನ್ಯೀಕರಣವು ರೈತರು ಮತ್ತು ಸಣ್ಣ ಉದ್ಯಮಗಳನ್ನು ಕೊಲ್ಲುವ ಅಸ್ತ್ರಗಳಾಗಿವೆ, ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಆದ್ದರಿಂದ ಸಮಾಜದಲ್ಲಿ ದ್ವೇಷ ಹರಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Advertisement