ಅಹಲ್ಯಾನಗರ: ಮಹಾರಾಷ್ಟ್ರದ ಅಹಲ್ಯಾನಗರ (ಹಿಂದಿನ ಅಹ್ಮದ್‌ನಗರ) ಪೊಲೀಸರು ಮತ್ತು ಮಿಲಿಟರಿ ಗುಪ್ತಚರ, ಸದರ್ನ್ ಕಮಾಂಡ್ ಜಂಟಿ ಕಾರ್ಯಾಚರಣೆಯಲ್ಲಿ ಒಂಬತ್ತು ಕಾಶ್ಮೀರಿಗಳನ್ನು ಬಂಧಿಸಲಾಗಿದ್ದು, ಒಂಬತ್ತು ರೈಫಲ್‌ಗಳು, 58 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಿಂದ ಬಂದಿರುವ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ನಗರಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ನಕಲಿ ಪರವಾನಗಿಗಳೊಂದಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ನಂತರ ತನಿಖೆ ಆರಂಭಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ತನಿಖೆಯ ಭಾಗವಾಗಿ, ಈ ಶಸ್ತ್ರಾಸ್ತ್ರ ಪರವಾನಗಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಮ್ಮು-ಕಾಶ್ಮೀರ ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಇವುಗಳು ಅಸಲಿ ಅಲ್ಲ ಎಂಬುದು ದೃಢಪಟ್ಟ ನಂತರ ದಾಳಿ ನಡೆಸಲಾಯಿತು ಎಂದು ಅವರು ಹೇಳಿದರು.
ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ. ಬಂಧಿತರೆಲ್ಲರೂ ಜಮ್ಮುವಿನ ರಾಜೌರಿ ಮೂಲದವರು ಎಂದು ಅವರು ತಿಳಿಸಿದರು.
Advertisement