ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ..
Manipur CM N Biren Singh
ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್(File photo | PTI)
Updated on

ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು NPP ಆರೋಪಿಸಿದೆ.

60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ ಏಳು NPP ಶಾಸಕರಿದ್ದಾರೆ. ಆಡಳಿತರೂಢ ಬಿಜೆಪಿ 32 ಸ್ಥಾನಗಳನ್ನು ಪಡೆದು ಸರಳ ಬಹುಮತ ಮಾಡಿದೆ. ಬಿಜೆಪಿ ಮಿತ್ರ ಪಕ್ಷ ಜೆಡಿಯು ಕೂಡಾ 6 ಸ್ಥಾನಗಳಲ್ಲಿ ಗೆಲುವು ಕಂಡಿದೆ.

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ ಬರೆದಿದೆ.

Manipur CM N Biren Singh
ಮಣಿಪುರ: ಸಿಎಂ ಸ್ಥಾನದಿಂದ ಬಿರೇನ್ ಸಿಂಗ್ ಕೆಳಗಿಳಿಸಲು 19 ಬಿಜೆಪಿ ಶಾಸಕರ ಒತ್ತಾಯ

ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು NPP ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com