ಅಮೆರಿಕದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ

ಕೆಲವು ದಿನಗಳ ಹಿಂದೆ ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್‌ನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಹಸ್ತಾಂತರಿಸುವಂತೆ ಪ್ರಸ್ತಾವನೆಯನ್ನು ಕಳುಹಿಸಿದ್ದ ಸಮಯದಲ್ಲಿ ಅನ್ಮೋಲ್ ಬಿಷ್ಣೋಯ್ ವಿರುದ್ಧ ಕ್ರಮ ಬಂದಿದೆ.
Lawrence Bishnoi-Anmol Bishnoi
ಲಾರೆನ್ಸ್‌ ಬಿಷ್ಣೋಯ್-ಅನ್ಮೋಲ್ ಬಿಷ್ಣೋಯ್TNIE
Updated on

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಮಹಾರಾಷ್ಟ್ರ ಪೊಲೀಸರು ಸೇರಿದಂತೆ ಭಾರತೀಯ ಏಜೆನ್ಸಿಗಳು ಈಗ ಆತನನ್ನು ಹಸ್ತಾಂತರಿಸುವ ಮತ್ತು ಬಂಧಿಸುವ ಕೆಲಸದಲ್ಲಿ ತೊಡಗಿವೆ.

ಕೆಲವು ದಿನಗಳ ಹಿಂದೆ ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್‌ನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಹಸ್ತಾಂತರಿಸುವಂತೆ ಪ್ರಸ್ತಾವನೆಯನ್ನು ಕಳುಹಿಸಿದ್ದ ಸಮಯದಲ್ಲಿ ಅನ್ಮೋಲ್ ಬಿಷ್ಣೋಯ್ ವಿರುದ್ಧ ಕ್ರಮ ಬಂದಿದೆ. ಅನ್ಮೋಲ್ ಬಿಷ್ಣೋಯ್ ಅವರು ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸೇರಿದಂತೆ ಕೆಲವು ಉನ್ನತ ಅಪರಾಧಗಳಲ್ಲಿ ಆರೋಪಿಯಾಗಿದ್ದಾರೆ.

ಅನ್ಮೋಲ್ ಬಿಷ್ಣೋಯ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ಘೋಷಿಸಿತ್ತು. 2022ರಲ್ಲಿ ದಾಖಲಾದ ಎರಡು ಎನ್‌ಐಎ ಪ್ರಕರಣಗಳಲ್ಲಿ ಅನ್ಮೋಲ್ ಬಿಷ್ಣೋಯ್ ವಿರುದ್ಧ ಆರೋಪಪಟ್ಟಿ ಮಾಡಲಾಗಿದೆ. ಕಳೆದ ತಿಂಗಳು, ಮುಂಬೈ ಪೊಲೀಸರ ಅಪರಾಧ ವಿಭಾಗವು ವಿಶೇಷ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ನ್ಯಾಯಾಲಯದಲ್ಲಿ ಪರಾರಿಯಾಗಿರುವ ಕ್ರಿಮಿನಲ್ ಅನ್ಮೋಲ್ ಬಿಷ್ಣೋಯ್ ಅವರನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಯಸಿದೆ ಎಂದು ಅರ್ಜಿ ಸಲ್ಲಿಸಿತ್ತು.

Lawrence Bishnoi-Anmol Bishnoi
Bishnoi Gang: 'ಪಶ್ಚಾತ್ತಾಪವೇನಿಲ್ಲ.. ಲಾರೆನ್ಸ್ ಬಿಷ್ಣೋಯ್ ನನ್ನ ಸ್ಫೂರ್ತಿ': Salman Khan ಗೆ ಬೆದರಿಕೆ ಹಾಕಿದ್ದ 'ಹಾವೇರಿ' ವ್ಯಕ್ತಿ ಹೇಳಿಕೆ!

ಏಪ್ರಿಲ್ 14ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಲಾರೆನ್ಸ್ ಮತ್ತು ಅನ್ಮೋಲ್ ಬಿಷ್ಣೋಯ್ ಅವರನ್ನು ವಾಂಟೆಡ್ ಆರೋಪಿಗಳನ್ನಾಗಿ ಮಾಡಲಾಗಿತ್ತು. ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತ ಅನ್ಮೋಲ್ ಬಿಷ್ಣೋಯ್ ವಿರುದ್ಧ ಏಪ್ರಿಲ್‌ನಲ್ಲಿ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com