ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, 'ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ' ಎಂದು ತಿಳಿಸಿದ್ದಾರೆ.
Parliament( File image)
ಸಂಸತ್ ( ಸಂಗ್ರಹ ಚಿತ್ರ)
Updated on

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ.

ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, 'ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ' ಎಂದು ತಿಳಿಸಿದ್ದಾರೆ.

ಸಂವಿಧಾನ ಅಂಗೀಕರಿಸಿ 75ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ನವೆಂಬರ್ 26ಕ್ಕೆ ಸೆಂಟ್ರಲ್ ಹಾಲ್‌ನ ಸಂವಿಧಾನ ಸದನ ಅಥವಾ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆಯಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಯನ್ನು ಮುಂದಿಡಲಿದೆ. ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ.

Parliament( File image)
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com