ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿಯ ಕೂದಲು ಕತ್ತರಿಸಿದ ಪ್ರಾಂಶುಪಾಲ!
ನವದೆಹಲಿ: ಶಾಲೆಗೆ ತಡವಾಗಿ ಬಂದಿದ್ದಕ್ಕಾಗಿ ಸರ್ಕಾರಿ ಶಾಲೆಯ ಪ್ರಾಂಶುಪಾಲನೋರ್ವ ವಿದ್ಯಾರ್ಥಿನಿಯ ಕೂದಲು ಕತ್ತರಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ಕೂದಲು ಕತ್ತರಿಸಿರುವ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.
ಸಮಗ್ರ ಶಿಕ್ಷಾ ರಾಜ್ಯ ಯೋಜನಾ ನಿರ್ದೇಶಕ ಬಿ ಶ್ರೀನಿವಾಸ ರಾವ್ ಮಾತನಾಡಿ, ಘಟನೆ ಇತ್ತೀಚೆಗೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದ್ದು, ಯು ಸಾಯಿ ಪ್ರಸನ್ನ ವಿರುದ್ಧ ಇಲಾಖೆ ತನಿಖೆ ಆರಂಭಿಸಿದೆ ಎಂದು ತಿಳಿಸಿದ್ದಾರೆ.
ನಿರ್ದೇಶಕರ ಪ್ರಕಾರ, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಜಿ ಮಡುಗುಳದಲ್ಲಿರುವ ಬಾಲಕಿಯರ ವಸತಿ ಶಾಲೆ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
"ನಿನ್ನೆ (ಸೋಮವಾರ), ನಾವು ವಿಚಾರಣೆ ನಡೆಸಿದ್ದೇವೆ ಮತ್ತು ತಡರಾತ್ರಿ (ಸೋಮವಾರ) ಜಿಲ್ಲಾಧಿಕಾರಿ ಅಮಾನತು ಆದೇಶ ಹೊರಡಿಸಿದ್ದಾರೆ" ಎಂದು ರಾವ್ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಹೆಣ್ಣು ಮಕ್ಕಳ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಪ್ರಾಂಶುಪಾಲ ಪ್ರಸನ್ನ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.
"ಪ್ರಾಂಶುಪಾಲರು (ಪ್ರಸನ್ನ) ಕೆಲವು ವಿದ್ಯಾರ್ಥಿಗಳ ಕೂದಲು/ಹೆಚ್ಚುವರಿ ಕೂದಲನ್ನು ಕತ್ತರಿಸುವ ಮೂಲಕ ಕ್ರಮ ಕೈಗೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಆದ್ದರಿಂದ, ಪ್ರಾಥಮಿಕ ಆರೋಪವು ಅನುಮಾನಾಸ್ಪದವಾಗಿ ಸಾಬೀತಾಗಿದೆ" ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ