ಅಪಘಾತ, ಪ್ರತಿಭಟನೆ: ಯುವಕನಿಂದ ಮಹಿಳಾ ಪೊಲೀಸ್ ಅಧಿಕಾರಿಗೆ 'ಕಪಾಳಮೋಕ್ಷ', ವಿಡಿಯೋ Viral

ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಯುವಕನೋರ್ವ ಪೊಲೀಸ್ ಅಧಿಕಾರಿಗೇ ಕಪಾಳ ಮೋಕ್ಷ ಮಾಡಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
Youth Slaps Woman Police Officer
ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ
Updated on

ಭೋಪಾಲ್: ಅಪಘಾತದ ಬಳಿಕ ನಡೆದ ಪ್ರತಿಭಟನೆ ವೇಳೆ ಯುವಕನೋರ್ವ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಯುವಕನೋರ್ವ ಪೊಲೀಸ್ ಅಧಿಕಾರಿಗೇ ಕಪಾಳ ಮೋಕ್ಷ ಮಾಡಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

Youth Slaps Woman Police Officer
Uttar Pradesh: ದಟ್ಟ ಮಂಜಿನಿಂದ ಸರಣಿ ಅಪಘಾತ, 12 ವಾಹನ ಢಿಕ್ಕಿ, ಇಬ್ಬರು ಬೈಕರ್ ಸಾವು! Video

ಮೂಲಗಳ ಪ್ರಕಾರ, ಬಡಗಾಂವ್ ಧಸನ್ ಪೊಲೀಸ್ ಠಾಣಾ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು 50 ವರ್ಷದ ಘುರ್ಕಾ ಲೋಧಿ ಎಂಬ ರೈತ ಸಾವನ್ನಪ್ಪಿದ್ದರು. ಸೋಮವಾರ ಬೆಳಗ್ಗೆ ಅವರ ಕುಟುಂಬಕ್ಕೆ ಈ ವಿಷಯ ತಿಳಿದಿದ್ದು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸ್ಥಳೀಯರೆಲ್ಲಾ ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ತಡವಾದ ಸ್ಪಂದನೆಯಿಂದ ಗಾಯಗೊಂಡ ರೈತನಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ದೊರೆಯದೇ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಖರ್ಗಾಪುರ-ಬಡಗಾಂವ ರಸ್ತೆ ತಡೆ ನಡೆಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.

ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ದೌಡಾಯಿಸಿ ರಸ್ತೆ ತಡೆ ತೆರವುಗೊಳಿಸಿದ್ದರು. ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಪೊಲೀಸರು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ನಡುವೆ ಮಹಿಳಾ ಪೊಲೀಸ್​ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್​ ಎಂದೂ ಕೂಡ ನೋಡದೇ ತಿರುಗಿಸಿ ಮಹಿಳಾ ಅಧಿಕಾರಿಯ ಕೆನ್ನೆಗೆ ಹೊಡೆದಿದ್ದಾನೆ.

ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.

ಸದ್ಯ ವಿಡಿಯೋ ವೈರಲ್​ ಆಗುತ್ತಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿ ಅಧಿಕಾರಿ ಮತ್ತು ಯುವಕರ ನಡುವಿನ ವಾಗ್ವಾದ ಮತ್ತು ಕಪಾಳ ಮೋಕ್ಷವನ್ನು ಸ್ಪಷ್ಟವಾಗಿ ಸೆರೆಹಿಡಿಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com