ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಶಿವಸೇನೆ ಅಭ್ಯರ್ಥಿ ಕಾರಿನ ಮೇಲೆ ಗುಂಡಿನ ದಾಳಿ!

ಮತದಾನದ ದಿನ ಅಶೋಕ್ ಶುಗರ್ ಮಿಲ್ಸ್ ಬಳಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು, ಕಾಂಬಳೆ ಅವರ ಕಾರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಶಿವಸೇನಾ ಅಭ್ಯರ್ಥಿ ಭಾವುಸಾಹೇಬ್ ಕಾಂಬ್ಳೆ ಅವರ ಕಾರಿನ ಮೇಲೆ ಬುಧವಾರ ಬೆಳಗ್ಗೆ ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತದಾನದ ದಿನ ಅಶೋಕ್ ಶುಗರ್ ಮಿಲ್ಸ್ ಬಳಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು, ಕಾಂಬಳೆ ಅವರ ಕಾರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

ಅದೃಷ್ಟವಶಾತ್ ದುಷ್ಕರ್ಮಿಗಳು ಹಾರಿಸಿದ ಗುಂಡು ಕಾರು ಮತ್ತು ಕಾಂಬ್ಲೆಗೆ ತಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಮಹಾರಾಷ್ಟ್ರ ಚುನಾವಣೆ: ವೋಟಿಗಾಗಿ ಹಣ ಹಂಚಿದ ಆರೋಪ; ಬಿಜೆಪಿ ನಾಯಕನ ವಿರುದ್ಧ FIR; Video

ಕಾಂಬ್ಳೆ ಅವರು ನೀಡಿದ ದೂರಿನ ಮೇರೆಗೆ ಅಹಲ್ಯಾನಗರ ಜಿಲ್ಲೆಯ ಶ್ರೀರಾಮಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆ ಸಂಬಂಧ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಬಳೆ ಅವರು ಕಾಂಗ್ರೆಸ್‌ನ ಹೇಮಂತ್ ಭುಜಂಗರಾವ್ ಓಗಳೆ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com