ನವದೆಹಲಿ: ಉನ್ನತ ಶಿಕ್ಷಣ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ ಸಂಜಯ್ ಮೂರ್ತಿ ಅವರು ಗುರುವಾರ ಭಾರತದ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಜಯ್ ಮೂರ್ತಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಿಎಜಿ ಗಿರೀಶ್ ಚಂದ್ರ ಮುರ್ಮು ಅವರು ಬುಧವಾರ ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಹಿಮಾಚಲ ಪ್ರದೇಶ ಕೇಡರ್‌ನ 1989 ಬ್ಯಾಚ್‌ನ ಐಎಎಸ್ ಅಧಿಕಾರಿದ ಸಂಜಯ್ ಮೂರ್ತಿ ಅವರನ್ನು ಸೋಮವಾರ ಕೇಂದ್ರ ಸರ್ಕಾರ ನೇಮಕ ಮಾಡಿತ್ತು.
ಇಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಗಿ ಕೆ ಸಂಜಯ್ ಮೂರ್ತಿ ಅವರು ಪ್ರಮಾಣ ವಚನ ಸ್ವೀಕರಿಸಿದರು'' ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಉಪರಾಷ್ಟ್ರಪತಿ ಜಗದೀಪ್ ಧಂಖರ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಇತರ ಗಣ್ಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement