ಹಜಾರಿಬಾಗ್ (ಜಾರ್ಖಂಡ್): ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರಯಾಣಿಕರೊಂದಿಗೆ ಪಾಟ್ನಾಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣೆಯ ಬಳಿ ಈ ಘಟನೆ ಸಂಭವಿಸಿದ್ದು, ತಿರುವು ತೆಗೆದುಕೊಳ್ಳುವಾಗ ಬಸ್ ಪಲ್ಟಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದುವರೆಗೆ ಏಳು ಜನರು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಅಪಘಾತದ ವೇಳೆ ಕೋಲ್ಕತ್ತಾದಿಂದ ಪಾಟ್ನಾಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು.
ಆಲಿಗಢ (ಉತ್ತರ ಪ್ರದೇಶ): ಇಲ್ಲಿನ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಐವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ವಾಹನಗಳು ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಖಾಸಗಿ ಬಸ್ ದೆಹಲಿಯ ಕಾಶ್ಮೀರ್ ಗೇಟ್‌ನಿಂದ ಪೂರ್ವ ಉತ್ತರ ಪ್ರದೇಶದ ಅಜಂಗಢಕ್ಕೆ ತೆರಳುತ್ತಿತ್ತು ಎಂದು ಗಾಯಗೊಂಡ ಪ್ರಯಾಣಿಕರೊಬ್ಬರು ಸುದ್ದಿಗಾರರಿಗೆ ತಿಳಿಸಿದರು. ಡಿಕ್ಕಿಯಲ್ಲಿ ಸಿಲುಕಿದ ಟ್ರಕ್ ನಲ್ಲಿ ಗಾಜಿನ ವಸ್ತುಗಳನ್ನು ಸಾಗಿಸಲಾಗುತ್ತಿತ್ತು.
ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಐವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಲಿಗಢ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದ್ದು, ಅಪಘಾತ ಸಂಭವಿಸಿದ ಯಮುನಾ ಎಕ್ಸ್‌ಪ್ರೆಸ್‌ವೇ ಕ್ಯಾರೇಜ್‌ವೇಯಲ್ಲಿ ಸಾಮಾನ್ಯ ಸಂಚಾರ ಪುನರಾರಂಭಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement