ನಾಳೆ ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಫಲಿತಾಂಶ ಪ್ರಕಟ: ಎರಡೂ ರಾಜ್ಯಗಳಿಗೆ ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ವೀಕ್ಷಕರಾಗಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಗೆ ಮತ್ತೆ ಅಧಿಕಾರ; ಜಾರ್ಖಂಡ್ ಸಹ ಎನ್ ಡಿಎ ವಶಕ್ಕೆ
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಗೆ ಮತ್ತೆ ಅಧಿಕಾರ; ಜಾರ್ಖಂಡ್ ಸಹ ಎನ್ ಡಿಎ ವಶಕ್ಕೆ
Updated on

ನವದೆಹಲಿ: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೇರಿದಂತೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ಕಾಂಗ್ರೆಸ್ ಶುಕ್ರವಾರ ಈ ಎರಡೂ ರಾಜ್ಯಗಳಲ್ಲಿ ಚುನಾವಣೋತ್ತರ ಸನ್ನಿವೇಶಗಳನ್ನು ಮೇಲ್ವಿಚಾರಣೆ ಮಾಡಲು ವೀಕ್ಷಕರನ್ನು ನೇಮಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ವೀಕ್ಷಕರಾಗಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಜಾರ್ಖಂಡ್‌ಗೆ ತಾರಿಕ್ ಅನ್ವರ್, ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಕೃಷ್ಣ ಅಲ್ಲವೂರು ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಗೆ ಮತ್ತೆ ಅಧಿಕಾರ; ಜಾರ್ಖಂಡ್ ಸಹ ಎನ್ ಡಿಎ ವಶಕ್ಕೆ
ಮುಖ್ಯಮಂತ್ರಿ ಗಾದಿಗಾಗಿ ಎಂವಿಎ-ಮಹಾಯುತಿ ನಡುವೆ ಫೈಟ್‌: ಯಾರಾಗಲಿದ್ದಾರೆ 'ಮಹಾ' ಸಾರಥಿ?

ಹಲವು ಎಕ್ಸಿಟ್ ಪೋಲ್‌ಗಳು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಕೆಲವೇ ಕೆಲವು ಎಕ್ಸಿಟ್ ಪೋಲ್ ಗಳು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸದಸ್ಯರ ಅಗತ್ಯ ಇದ್ದು, 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತಕ್ಕೆ 41 ಶಾಸಕರ ಅಗತ್ಯ ಇದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ-ಎನ್‌ಸಿಪಿ ಮೈತ್ರಿಕೂಟ ಅಧಿಕಾರದಲ್ಲಿದ್ದರೆ, ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com