ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಆಡಳಿತರೂಢ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದೆ.
ಮಹಾರಾಷ್ಟ್ರದಲ್ಲಿ ಈಗ ಮುಖ್ಯಮಂತ್ರಿ ಕುರ್ಚಿಗಾಗಿ ಹೋರಾಟ ಆರಂಭವಾಗಿದ್ದು, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು, ತಮ್ಮ ಪತಿ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಶಾಸಕ ಪ್ರವೀಣ್ ದಾರೇಕರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈತ್ರಿಕೂಟದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಬಿಜೆಪಿ ಶಾಸಕ ಪ್ರತಿಪಾದಿಸಿದ್ದಾರೆ.
ಬಿಜೆಪಿ - ಶಿವಸೇನೆ ಶಿಂಧೆ ಬಣ - ಎನ್‌ಸಿಪಿ ಅಜಿತ್ ಪವಾರ್ ಬಣದ ಆಡಳಿತಾರೂಢ ಮೈತ್ರಿಕೂಟ ‘ಮಹಾಯುತಿ’ ಬಹುಮತಕ್ಕಿಂತ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, 220ಕ್ಕೊ ಹೆಚ್ಚು ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 145 ಮ್ಯಾಜಿಕ್ ಸಂಖ್ಯೆ ದಾಟಿರುವ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳು ‘ಮಹಾಯುತಿ’ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಎಂದು ಹೇಳಿದ್ದವು.
Advertisement