ಮಹಾರಾಷ್ಟ್ರದಲ್ಲಿ ಮಹಾಯುತಿಗೆ 235 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು; ಜಾರ್ಖಂಡ್‌ನಲ್ಲಿ 56 ಸ್ಥಾನ ಗೆದ್ದ INDIA bloc!

ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರ ಹಾಗೂ ಅಜಿತ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 235 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು; ಜಾರ್ಖಂಡ್‌ನಲ್ಲಿ 56 ಸ್ಥಾನ ಗೆದ್ದ INDIA bloc!
Updated on

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಂದಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ 'ಪ್ರಚಂಡ' ಗೆಲುವು ಸಾಧಿಸಿದ್ದರೆ ಅತ್ತ ಜಾರ್ಖಂಡ್ ನಲ್ಲಿ INDIA bloc 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿಗೆ ಮುಖಭಂಗ ಅನುಭವಿಸಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರ ಹಾಗೂ ಅಜಿತ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಸತತ ಮೂರನೇ ಬಾರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಚನೆ ಮಾಡಲಿದೆ. ಇನ್ನು ಮಹಾವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಕೇವಲ 49 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ವಿಪಕ್ಷ ನಾಯಕನ ಸ್ಥಾನವು ಇಲ್ಲದಂತಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಯುಬಿಟಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಕೇವಲ 10 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಇನ್ನು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 16 ಕ್ಷೇತ್ರಗಳನ್ನು ಮಾತ್ರ ಗೆದ್ದಿದೆ. ಆ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗ ಎದುರಿಸಿದೆ. ಇದು ವಿಪಕ್ಷ ನಾಯಕ ರಾಹುಲ್ ಗಾಂಧಿ ನಾಯಕತ್ವದ ಮೇಲೆ ಪ್ರಶ್ನೆಗಳು ಹೇಳುವಂತೆ ಮಾಡಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಂದು ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನ ಗಳಿಸಲು ಕನಿಷ್ಠ 29 ಸ್ಥಾನಗಳನ್ನು ಗೆದ್ದಿರಬೇಕು. ಹಾಲಿ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆ ಬಣ 20 ಸ್ಥಾನ, ಕಾಂಗ್ರೆಸ್ 16 ಸ್ಥಾನ ಮತ್ತು ಶರದ್ ಪವಾರ್ ಎನ್ ಸಿಪಿ ಪಕ್ಷ 10 ಸ್ಥಾನಗಳನ್ನು ಮಾತ್ರ ಪಡೆದಿದೆ. ಹೀಗಾಗಿ ಮಹಾವಿಕಾಸ್ ಅಘಾಡಿಯ ಯಾವುದೇ ಪಕ್ಷವೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅರ್ಹತೆ ಪಡೆಯದೇ ಇರುವುದು ಮೈತ್ರಿಕೂಟಕ್ಕೆ ನುಂಗಲಾರದ ತುತ್ತಾಗಿದೆ.

ಮಹಾರಾಷ್ಟ್ರದಲ್ಲಿ ಮಹಾಯುತಿಗೆ 235 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು; ಜಾರ್ಖಂಡ್‌ನಲ್ಲಿ 56 ಸ್ಥಾನ ಗೆದ್ದ INDIA bloc!
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 'ಪ್ರಚಂಡ ಗೆಲುವು': INDI ಕೂಟದ ನಕಾರಾತ್ಮಕ ರಾಜಕೀಯ, ಸುಳ್ಳು ಮತ್ತು ದ್ರೋಹ ಸೋತಿದೆ- ಪ್ರಧಾನಿ ಮೋದಿ

ಮತ್ತೊಂಡೆದೆ ಜಾರ್ಖಂಡ್ ನಲ್ಲಿ 81 ವಿಧಾನಸಭೆ ಕ್ಷೇತ್ರಗಳ ಪೈಕಿ ಹೇಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಒಂದೇ 34 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್ 16 ಹಾಗೂ ಆರ್ ಜೆಡಿ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 56 ಕ್ಷೇತ್ರಗಳ ಗೆಲುವಿನೊಂದಿಗೆ INDIA blocಗೆ ಸ್ಪಷ್ಟ ಬಹುಮತ ಬಂದಿದ್ದು ಹೇಮಂತ್ ಸೊರೆನ್ ನೇತೃತ್ವದಲ್ಲಿ ಜೆಎಂಎಂ ಸರ್ಕಾರ ರಚಿಸಲಿದೆ. ಇನ್ನು ಈ ಬಾರಿ ಗೆಲುವಿನ ನಿರೀಕ್ಷೆ ಹೊಂದಿದ್ದ ಬಿಜೆಪಿಗೆ ಮುಖಭಂಗವಾಗಿದ್ದು ಎನ್ ಡಿಎ ಮೈತ್ರಿಕೂಟ ಕೇವಲ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com