ಮುಂಬೈ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಗಳಿಸಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದಿದೆ.
ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ನ.25 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನ.26 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಂಬೈನ ಬಿಜೆಪಿ ಕಚೇರಿಯಲ್ಲಿ ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ.
ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ, "ನಾವು ನಿರೀಕ್ಷಿಸಿದಂತೆ, ನಮಗೆ ಉತ್ತಮ ಸಂಖ್ಯೆಗಳು ಸಿಕ್ಕಿವೆ. ಮಹಾಯುತಿಯ ಬೆಂಬಲಕ್ಕೆ ನಿಂತು ಈ ಪ್ರಚಂಡ ಗೆಲುವು ನೀಡಿದ ಎಲ್ಲಾ ಮತದಾರರಿಗೆ ನಾನು ಧನ್ಯವಾದ..." ಎಂದು ಹೇಳಿದ್ದಾರೆ.
Advertisement