ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದತ್ತ ಎಲ್ಲರ ಕಣ್ಣು ನೆಟ್ಟಿತ್ತು. ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರ ಬದಲಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು ದಾಖಲೆಯ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ, ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನವ್ಯಾ ಹರಿದಾಸ್ ಅವರಿಂದ ಸ್ಪರ್ಧಿಸಿದ್ದರು. ಇದೀಗ ಪ್ರಿಯಾಂಕಾ ವಾದ್ರಾ 6 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದು ನಾಲ್ಕು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದೇ ಕ್ಷೇತ್ರದಲ್ಲಿ ಅವರ ಸಹೋದರ ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಆರು ವಿಧಾನಸಭೆ ಕ್ಷೇತ್ರಗಳಲ್ಲಿ TMC ಕ್ಲೀನ್ ಸ್ವೀಪ್
ಪಶ್ಚಿಮ ಬಂಗಾಳದ ಆರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಟಿಎಂಸಿ ಆರು ಸ್ಥಾನಗಳನ್ನು ಗೆದ್ದು ಬೀಗಿದೆ. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದರು. ಉಪಚುನಾವಣೆ ಫಲಿತಾಂಶ ಜನಪರ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು.
Advertisement