ಅನಂತಪುರದಲ್ಲಿ ಬಸ್ ಮತ್ತು ಆಟೋ ನಡುವೆ ಭೀಕರ ಡಿಕ್ಕಿ: ಏಳು ಕೂಲಿ ಕಾರ್ಮಿಕರು ಸಾವು!

ಕುತ್ತಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಮಂದಿ ಕೃಷಿ ಕೂಲಿ ಕಾರ್ಮಿಕರು ಆಟೋದಲ್ಲಿ ಗರಲದಿನ್ನೆಗೆ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯTINE
Updated on

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗರಾಲ್ದಿನ್ನೆ ಮಂಡಲದ ತಲಗಸ್ಪಲ್ಲೆ ಬಳಿ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುತ್ತಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಮಂದಿ ಕೃಷಿ ಕೂಲಿ ಕಾರ್ಮಿಕರು ಆಟೋದಲ್ಲಿ ಗರಲದಿನ್ನೆಗೆ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಿಂತಿರುಗುತ್ತಿದ್ದಾಗ ಎದುರುಗಡೆಯಿಂದ ಬಂದ ಆರ್‌ಟಿಸಿ ಬಸ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನುಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಅನಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಜಿಲ್ಲಾ ಎಸ್ಪಿ ಜಗದೀಶ್, ಡಿಎಸ್ಪಿ ವೆಂಕಟೇಶ್ವರಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ತನಿಖೆಗಾಗಿ ಪೊಲೀಸರು ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಪಘಾತದ ದೃಶ್ಯ
Video: ಆಟೋಗೆ ಕಾರು ಡಿಕ್ಕಿ; ಪೊಲೀಸ್ ಅಧಿಕಾರಿ ಮೇಲೆ ಸಾರ್ವಜನಿಕರಿಂದ ಸಾಮೂಹಿಕ ಹಲ್ಲೆ

ಈ ಘಟನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com